Sunday, September 8, 2024

ಅಲ್ಪಸಂಖ್ಯಾತರಷ್ಟೇ ಈ ರಾಜ್ಯದ ಪ್ರಜೆಗಳೇ ? ಇದೇನಾ ನೀವು ನಂಬಿರುವ ಜಾತ್ಯಾತೀತತೆ ? : ಶಾಸಕ ಯತ್ನಾಳ್‌

ಜನಪ್ರತಿನಿಧಿ ವಾರ್ತೆ (ಬೆಂಗಳೂರು) :  ನಿಮ್ಮ ಮತ ಬ್ಯಾಂಕ್ ಅನ್ನು ಬಲಪಡಿಸಿಕೊಳ್ಳಲು ಈ ರೀತಿ ತುಷ್ಟೀಕರಣ ರಾಜಕೀಯ ಮಾಡುವುದು ಹೇಯ ಹಾಗೂ ಸಂವಿಧಾನಕ್ಕೆ ಬಗೆದ ಅಪಚಾರ. ಸ್ಪರ್ದಾತ್ಮಕ ಯುಗದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕೊಡಬೇಕು, ತೆರಿಗೆದಾರರ ಹಣವನ್ನು ಯಾವುದೋ ಒಂದು ಸಮುದಾಯಕ್ಕೆ ಮೀಸಲು ಮಾಡುವುದು ನಿಮ್ಮ ಸ್ವಾರ್ಥ ಮನೋಭಾವವನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದಾರಾಮಯ್ಯ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹರಿಹಾಯ್ದಿದ್ದಾರೆ.  

ಈ ಬಗ್ಗೆ ತಮ್ಮ ಅಧಿಕೃತ ʼಎಕ್ಸ್‌ʼ ಖಾತೆಯ ಮೂಲಕ ಸರಣಿ ಟ್ವೀಟ್‌ ಮಾಡಿದ ಯತ್ನಾಳ್‌, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಘೋಷವಾಕ್ಯಗಳು ನಿಮ್ಮ ಚುನಾವಣಾ ಪ್ರಚಾರಕ್ಕೆ, ಭಾಷಣಗಳಿಗೆ ಸೀಮಿತವಾಯಿತು ಅಷ್ಟೇ. ಅಲ್ಪಸಂಖ್ಯಾತರಷ್ಟೇ ಈ ರಾಜ್ಯದ ಪ್ರಜೆಗಳೇ ? ಇದೇನಾ ನೀವು ನಂಬಿರುವ ಜಾತ್ಯಾತೀತತೆ ? ಇದೇನಾ ನಿಮ್ಮ ಸರ್ಕಾರದ ಸಮಾನತೆ ? ಬೇರೆ ಜಾತಿಯ ಪ್ರತಿಭಾನ್ವಿತ ಮಕ್ಕಳು/ವಿದ್ಯಾರ್ಥಿಗಳು ಏನು ಮಾಡಬೇಕು ? ಪ್ರಶ್ನೆ ಮಾಡಿದ್ದಾರೆ.  

ಭಾರತದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಮುಸಲ್ಮಾನರಿಗೆ ಎಂದು ಮಾಜಿ ಪ್ರಧಾನಿ ಶ್ರೀ ಡಾ.ಮನಮೋಹನ್ ಸಿಂಗ್ ಅವರು ಅಂದು ಹೇಳಿದ್ದನ್ನು, ಇಂದು ಕರ್ನಾಟಕದಲ್ಲಿ ಸಿದ್ದರಾಮಯ್ಯ ನವರು ಅನುಷ್ಠಾನಗೊಳ್ಳಿಸುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬಂಪರ್‌ ಕೊಡುಗೆ ನೀಡಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ. ಮೊತ್ತದ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದನ್ನು ವಿರೋಧಿಸಿ ಯತ್ನಾಳ್‌ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!