spot_img
Wednesday, January 22, 2025
spot_img

ಮುಷ್ಕರ ನಿರತ ಅತಿಥಿ ಉಪನ್ಯಾಸಕರ ಪ್ರಮುಖ ಬೇಡಿಕೆಗೆ ಒಪ್ಪದೆ, 5,000 ರೂ. ವೇತನ ಹೆಚ್ಚಳಕ್ಕೆ ಸರ್ಕಾರ ಸಮ್ಮತಿಸಿದೆ : ಡಾ. ಎಂ.ಸಿ. ಸುಧಾಕರ್‌

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ನೀಡುತ್ತಿರುವ ಗೌರವಧನದಲ್ಲಿ ರೂ. ಐದು ಸಾವಿರವ ಹೆಚ್ಚಳ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಅತಿಥಿ ಉಪನ್ಯಾಸಕರ ನಿಯೋಗದ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್, ಅತಿಥಿ ಉಪನ್ಯಾಸಕರಿಗೆ ಗರಿಷ್ಠ 5 ಸಾವಿರ ರೂ. ಹೆಚ್ಚಳ ಮಾಡಲು ಸಿಎಂ ಸಮ್ಮತಿ ಸೂಚಿಸಿದ್ದಾರೆ.

ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನ ಪ್ರಸ್ತುತ 26,000ದಿಂದ 32,000 ಇದೆ. ಸದ್ಯ ಕಾರ್ಯನಿರ್ವಹಿಸುತ್ತಿರುವ 10,600 ಅತಿಥಿ ಉಪನ್ಯಾಸಕರಿಗೂ ವೇತನ ಹೆಚ್ಚಳದ ಅನುಕೂಲ ಸಮಾನವಾಗಿ ದೊರಕಲಿದೆ ಎಂದು ಅವರು ಹೇಳಿದ್ದು, ಜನವರಿ 1 ರಿಂದಲೇ ಇದನ್ನು ಜಾರಿಗೊಳಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು, ತಿಥಿ ಉಪನ್ಯಾಸಕರು 60ನೇ ವರ್ಷಕ್ಕೆ ನಿವೃತ್ತಿಗೊಂಡ ನಂತರವೂ ಅವರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ₹ 5 ಲಕ್ಷ ಧನಸಹಾಯ ನೀಡುವ ಯೋಜನೆ ರೂಪಿಸಿದೆ.

ಅತಿಥಿ ಉಪನ್ಯಾಸಕರಾಗಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದವರಿಗೆ, ಅವರು 60ನೇ ವರ್ಷಕ್ಕೆ ನಿವೃತ್ತರಾಗುವ ವೇಳೆ ₹ 5 ಲಕ್ಷ ಧನಸಹಾಯ ನೀಡಲಾಗುವುದು. ಅದಕ್ಕಾಗಿ ₹ 72 ಕೋಟಿ ನಿಗದಿ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌ ತಿಳಿಸಿದ್ದಾರೆ.

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಪ್ರಮುಖ ಬೇಡಿಕೆ ಸೇವಾ ನೇಮಕಾತಿಗೆ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ. ಆದರೆ ಗರಿಷ್ಠ 5,000 ರೂ. ವೇತನ ಹೆಚ್ಚಿಸಲು ಸರ್ಕಾರ ಸಮ್ಮತಿ ಸೂಚಿಸಿದೆ.  

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!