Sunday, September 8, 2024

2047 ರ ಹೊತ್ತಿಗೆ ಸಮೃದ್ಧ ಭಾರತವನ್ನು ಕಟ್ಟುವುದೇ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶ : ಕೋಟಾ ಶ್ರೀನಿವಾಸ ಪೂಜಾರಿ

ಜನಪ್ರತಿನಿಧಿ ವಾರ್ತೆ (ಕುಂದಾಪುರ) : ಒಂದು ಶಕ್ತಿಶಾಲಿ ಭಾರತವನ್ನು ನಿರ್ಮಾಣ ಮಾಡುವುದೇ ಈ ಯಾತ್ರೆಯ ಉದ್ದೇಶ.  ವಿಕಸಿತ ಭಾರತ ಸಂಕಲ್ಪದ ಅಡಿಯಲ್ಲಿ ಗ್ರಾಮ ಗ್ರಾಮಗಳಲ್ಲಿ ಪ್ರಧಾನ ಮಂತ್ರಿಯವರ ವಿಶ್ವಕರ್ಮ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸಮೃದ್ಧ ಭಾರತದ ಕಲ್ಪನೆಯ ಆಶಯಕ್ಕೆ ನಾವೆಲ್ಲರೂ ಶಕ್ತಿ ತುಂಬಿಸುವ ಅಗತ್ಯವಿದೆ ಎಂದು ಮಾಜಿ ಸಚಿವ ಹಾಗೂ ಕರ್ನಾಟಕ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ  ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಭಾರತದ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಮಾಡದ ಕೆಲಸವನ್ನು ಮೋದಿ ಮಾಡಿದ್ದಾರೆ. ವಿಕಸಿತ ಭಾರತ ಸಂಕಲ್ಪ ಯಾತ್ರೆ ಆ ದಿಸೆಯಲ್ಲಿ ಮಹತ್ವದ್ದಾಗಿದೆ ಎಂದಿದ್ದಾರೆ.    

ಕೇಂದ್ರ ಸರ್ಕಾರದ 7O ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೆ ತಲುಪಿಸುವುದು ಈ ಯಾತ್ರೆಯ ಉದ್ದೇಶಾಗಿದೆ. ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ  ಎಲ್ಲಾ ಗ್ರಾಮ ಪಂಚಾಯತ್‌ ಗಳಲ್ಲಿ ಸಂಚರಿಸಲಿದ್ದು, ಎಲ್‌ಇಡಿ ಪರೆದೆಯ ಮೂಲಕ ಕೇಂದ್ರ ಸರ್ಕಾರದ ಬಹುತೇಕೆ ಎಲ್ಲಾ ಯೋಜನೆಗಳ ಮಾಹಿತಿಯನ್ನು ನೀಡಲಾಗುತ್ತದೆ ಎಂದು ವಿವರಿಸಿದ್ದಾರೆ.  

2047 ರ ಹೊತ್ತಿಗೆ ಈ ಯಾತ್ರೆಯ ಮೂಲಕ ಒಂದು ಶಕ್ತಿಶಾಲಿ ಭಾರತವನ್ನು ನಿರ್ಮಾಣ ಮಾಡುವುದೇ ಪ್ರಧಾನ ಉದ್ದೇಶವಾಗಿದೆ. ಗ್ರಾಮ ಪಂಚಾಯತ್‌ ವ್ಯಾಪ್ತಿಯ ಎಲ್ಲಾ ಸಮಸ್ಯೆಗಳನ್ನು ಹೋಗಲಾಡಿಸುವುದರ ಜೊತೆಜೊತೆಗೆ ಒಂದು ಸಮೃದ್ಧ ದೇಶವನ್ನು ಕಟ್ಟುವ ಸಂಕಲ್ಪದ ಯೋಜನೆಯನ್ನು ಸಾಕಾರಗೊಳಿಸುವವರೆಗೆ ತಲುವಂತೆ ಮಾಡುವುದು ನಮ್ಮ ಕರ್ತವ್ಯ ಎಂದರು.  

ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ, ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಲೀಡ್ ಬ್ಯಾಂಕ್ ಉಡುಪಿ ಜಿಲ್ಲಾ ಮೆನೇಜರ್ ಪಿ.ಎಂ ಪಿಂಜರ, ವಿಕಸಿತ ಭಾರತ ಕಾರ್ಯಕ್ರಮದ ಬೈಂದೂರು ಸಂಚಾಲಕ ಹರೀಶ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!