spot_img
Saturday, April 18, 2026
spot_img

ನಿರಪರಾಧಿಗಳಿಗೆ ತೊಂದರೆ ಆಗಲು ನಮ್ಮ ಸರ್ಕಾರ ಬಿಡುವುದಿಲ್ಲ, ತಪ್ಪು ಮಾಡದವರ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳುತ್ತಾರೆ ? : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ ( ಬೆಂಗಳೂರು) : ಯಾರು ಕಾನೂನನ್ನು ಉಲ್ಲಂಘನೆ ಮಾಡುತ್ತಾರೋ ಅವರನ್ನು ಬಂಧನಕ್ಕೊಳಪಡಿಸಲಾಗುತ್ತದೆ, ಯಾವುದೇ ಕಾರಣವಿಲ್ಲದೆ ಯಾಕೆ ಬಂಧನಕ್ಕೆ ಒಳಪಡಿಸಲಾಗುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸಂಸದ ಪ್ರತಾಪ್​ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ ಕೇಸ್​ ವಿಚಾರವಾಗಿ ವರದಿಗಾರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡದವರ ಮೇಲೆ ಯಾಕೆ, ಯಾರು ಕ್ರಮ ತೆಗೆದುಕೊಳ್ಳುತ್ತಾರೆ ? ನಮ್ಮ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ. ನಿರಪರಾಧಿಗಳಿಗೆ ಯಾರಿಗೂ ತೊಂದರೆ ಆಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ವರದಿಗಾರರಿಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಅರಣ್ಯ ಇಲಾಖೆ ಅನುಮತಿ ಇಲ್ಲದಿದ್ದರೆ ಕ್ರಮ ಆಗುತ್ತದೆ. ಈ ವಿಚಾರದಲ್ಲಿ ನಾವು ಯಾರೂ ಮಧ್ಯಸ್ಥಿಕೆ  ಮಾಡುವುದಿಲ್ಲ. ಅಧಿಕಾರಿಗಳು ಅವರ ಕೆಲಸ ಮಾಡಿದ್ದಾರೆ. ಎಲ್ಲರಿಗೂ ಭಯ ಇರಬೇಕೆಂದು ಕ್ರಮಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಕ್ರಮವಾಗಿ ಮರ ಕಡಿದು ಸಾಗಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಅಧಿಕಾರಿಗಳು ಬಂಧನಗೊಳಿಸಿದ್ದರು. ಸದ್ಯ ಜಾಮೀನು ಮಂಜೂರಾದ ಕಾರಣ ವಿಕ್ರಂ ಸಿಂಹ ಹೊರಬಂದಿದ್ದಾರೆ. ಇದಕ್ಕೂ ಮುನ್ನ ಈ ಪ್ರಕರಣದ ಕುರಿತು ಮಾತನಾಡಿದ್ದ ಪ್ರತಾಪ್‌ ಸಿಂಹ ನೇರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!