spot_img
Saturday, April 18, 2026
spot_img

ಬಂಡವಾಳ ಹೂಡಿಕೆ : ಕೇರಳದ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಹೂಡಿರುವ ಬಂಡವಾಳದ ವಿವರ ಕೇಳಿದ ಸಿಬಿಐ !

ಜನಪ್ರತಿನಿಧಿ ವಾರ್ತೆ( ಕೇರಳ) :  ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಹೌದು, ಕೇರಳದ ಜೈಹಿಂದ್‌ ಎಂಬ ಖಾಸಗಿ ಸುದ್ದಿ ವಾಹಿನಿಗೆ ಶಿವಕುಮಾರ್‌ ಹೂಡಿರುವ ಬಂಡವಾಳದ ವಿವರವನ್ನು ಕೇಳಿ ಕಾಂಗ್ರೆಸ್‌ ನಾಯಕರು ಹಾಗೂ ಜೈಹಿಂದ್‌ ಸುದ್ದಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸಿಬಿಐ ನೋಟಿಸ್‌ ಜಾರಿ ಮಾಡಿದೆ.

ಜೈಹಿಂದ್‌ ಕಮ್ಯುನಿಕೇಷನ್ಸ್‌ ಪ್ರೈ.ಲಿ. ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್‌. ಶಿಜು ಅವರಿಗೆ ಜನವರಿ 11ರಂದು ಡಿಕೆಶಿ ಹೂಡಿರುವ ಬಂಡವಾಳ ಸಹಿತ ವಾಹಿನಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳೊಂದಿಗೆ ವಿಚಾರಣೆಗೆ ಬರುವಂತೆ ಸಿಬಿಐ ತನಿಖಾಧಿಕಾರಿ ನೋಟಿಸ್‌ ನೀಡಿದ್ದಾರೆ. ಸಿಆರ್‌ಪಿಸಿ ಸೆಕ್ಷನ್‌ 91ರಡಿ ನೋಟಿಸ್‌ ನೀಡಲಾಗಿದ್ದು, ಡಿ.ಕೆ.ಶಿವಕುಮಾರ್‌ ಹಾಗೂ ಅವರ ಪತ್ನಿ ಉಷಾ ಶಿವಕುಮಾರ್‌  ವಾಹಿನಿಗೆ ಹೂಡಿರುವ ಬಂಡವಾಳಗಳ ದಾಖಲೆ, ಅದಕ್ಕೆ ಪಡೆದಿರುವ ಡಿವಿಡೆಂಡ್‌, ಷೇರು ವಹಿವಾಟು, ಹಣಕಾಸು ವಹಿವಾಟು, ಬ್ಯಾಂಕ್‌ ವಿವರ, ಲೆಡ್ಜರ್‌ ಅಕೌಂಟ್‌ಗಳು, ಗುತ್ತಿಗೆ ಕರಾರು ಮುಂತಾದ ಎಲ್ಲಾ ವಿವರಗಳನ್ನು ನೀಡುವಂತೆ ನೋಟೀಸ್‌ ನಲ್ಲಿ ಸೂಚಿಸಲಾಗಿದೆ ಎಂದು ಹೇಳಲಾಗಿದೆ. ಮಾತ್ರವಲ್ಲದೇ ವಾಹಿನಿಯಲ್ಲಿ ಡಿ.ಕೆ. ಶಿವಕುಮಾರ್‌ ಪುತ್ರ ಹಾಗೂ ಕುಟುಂಬದ ಇತರ ಸದಸ್ಯರು ಹೂಡಿರುವ ಬಂಡವಾಳದ ವಿವರವನ್ನೂ ಒಪ್ಪಿಸುವಂತೆ ಸಿಬಿಐ ಸೂಚಿಸಿದೆ.

ಸಿಬಿಐನಿಂದ ತಮಗೆ ನೋಟಿಸ್‌ ಬಂದಿರುವುದನ್ನು ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಶಿಜು ಖಚಿತಪಡಿಸಿದ್ದು, ಎಲ್ಲಾ ದಾಖಲೆಗಳನ್ನು ತನಿಖಾ ಸಂಸ್ಥೆಗೆ ನೀಡುವುದಾಗಿ ತಿಳಿಸಿದ್ದಾರೆ. ‘ನಮ್ಮ ವ್ಯವಹಾರದಲ್ಲಿ ಯಾವುದೇ ಅಕ್ರಮಗಳು ನಡೆದಿಲ್ಲ. ಸಿಬಿಐ ಅಧಿಕಾರಿಗಳ ನೋಟಿಸ್‌ ರಾಜಕೀಯ ದುರುದ್ದೇಶದಿಂದ ಕೂಡಿದೆ. ಕೇಂದ್ರದ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಹಿಂದೆ ಕರ್ನಾಟಕದ ಬಿಜೆಪಿ ಸರ್ಕಾರ ಕೂಡ ಈ ಬಗ್ಗೆ ತನಿಖೆ ನಡೆಸಿತ್ತು. ಯಾವುದೇ ಅಕ್ರಮ ಪತ್ತೆಯಾಗದೆ ಕೇಸು ಮುಕ್ತಾಯವಾಗಿತ್ತು. ಈಗ ಮತ್ತೆ ತನಿಖೆ ಪುನಾರಂಭಿಸಿರುವುದು ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಪಕ್ಷಕ್ಕೆ ನೀಡುತ್ತಿರುವ ಕಿರುಕುಳವಾಗಿದೆ’ ಎಂದು ಶಿಜು ಆರೋಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!