spot_img
Saturday, April 18, 2026
spot_img

ಅವರಿಗೆ ಒಳಗೆ ಹಾಕುವ ಆಸಕ್ತಿ ಇದ್ದರೆ ಹಾಕಿಕೊಳ್ಳಲಿ, ಯಾವುದಕ್ಕೂ ಹೆದರಲ್ಲ : ಡಿ.ಕೆ ಶಿವಕುಮಾರ್

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಮಗೆ ನೋಟಿಸ್ ಕೊಟ್ಟಿರುವ ಬಗ್ಗೆ ವರದಿಗಾರರಿಗೆ ಸ್ಪಂದಿಸಿದ ಅವರು, ಪ್ರಕರಣದ ತನಿಖೆಗೆ ನೀಡಿರುವ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದ ನಂತರವೂ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಲ್ಲದೆ,
ನನ್ನ ಮೇಲೆ ದೌರ್ಜನ್ಯ ನಡೆಸಿ ಹಾಗೂ ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಅಂತ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ದೊಡ್ಡ ದೊಡ್ಡವರಿದ್ದಾರೆ, ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಹಿಂದಿನ ಸರ್ಕಾರ ಸಿಬಿಐಗೆ ತಲುಪಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಾಸ್‌ ಪಡೆದಿದೆ ಆದರೂ ಯಾವ ಲೆಕ್ಕಾಚಾರದಲ್ಲಿ ನೋಟೀಸ್ ಕೊಟ್ಟಿದ್ದಾರೆ ಎನ್ನುವುದು ಗೊತ್ತಿಲ್ಲ. ನನಗೆ ನೊಟೀಸ್ ಬಂದಿಲ್ಲ, ನನ್ನ ಸಂಸ್ಥೆಗೆ ಬಂದಿದೆ. ಹೆಂಡತಿ, ಮಕ್ಕಳ ವಿಚಾರಕ್ಕೆಲ್ಲಾ ಬಂದಿದೆ. ಆಮೇಲೆ ವೈಯಕ್ತಿಕವಾಗಿ ನನ್ನ ಬಳಿ ಬರುತ್ತಾರೆ. ಅವರಿಗೆ ಒಳಗೆ ಹಾಕುವ ಆಸಕ್ತಿ ಇದ್ದರೆ ಹಾಕಿಕೊಳ್ಳಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಯಾವುದಕ್ಕೂ ಹೆದರಲ್ಲ. ಸರ್ಕಾರ ಇದನ್ನ ಈಗಾಗಲೇ ಲೋಕಾಯುಕ್ತಕ್ಕೆ ಕೊಟ್ಟಿದೆ. ಈ ಬಗ್ಗೆ ಮುಂದಿನ ಪ್ರಕ್ರಿಯೆಗಳನ್ನು ಲೋಕಾಯುಕ್ತ ನೋಡಿಕೊಳ್ಳುತ್ತದೆ. ತನಿಖೆ ನಡೆಸುತ್ತದೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!