Thursday, November 21, 2024

ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತನೆಯ ರಾಮನ ಮೂರ್ತಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ !

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಶ್ರೀರಾಮ ಜನ್ಮ ಸ್ಥಳ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠೆಗೆ ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಸೃಷ್ಟಿಸಿರುವ ಮೂರ್ತಿ ಆಯ್ಕೆಯಾಗಿದೆ.

ಶ್ರೀರಾಮ ಮೂರ್ತಿಯ ಆಯ್ಕೆಯ ಬಗ್ಗೆ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಎಕ್ಸ್‌ ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ  ಮಾಹಿತಿ ಹಂಚಿಕೊಂಡಿದ್ದು,”ಎಲ್ಲಿ ರಾಮನೋ ಅಲ್ಲಿ ಹನುಮನು” ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಅಂತಿಮಗೊಂಡಿದೆ. ನಮ್ಮ ನಾಡಿನ ಹೆಸರಾಂತ ಶಿಲ್ಪಿ ನಮ್ಮ ಹೆಮ್ಮೆಯ ಶ್ರೀ  ಅರುಣ್‌ ಯೋಗಿರಾಜ್ ಅವರು ಕೆತ್ತಿರುವ ಶ್ರೀರಾಮನ ವಿಗ್ರಹ ಪುಣ್ಯಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. ರಾಮ ಹನುಮರ ಅವಿನಾಭಾವ ಸಂಬಂಧಕ್ಕೆ ಇದು ಮತ್ತೊಂದು ನಿದರ್ಶನ. ಹನುಮನ ನಾಡು ಕರ್ನಾಟಕದಿಂದ ರಾಮಲಲ್ಲಾನಿಗೆ ಇದೊಂದು ಮಹತ್ವಪೂರ್ಣ ಸೇವೆ ಎಂದರೆ ತಪ್ಪಾಗಲಾರದು ಏಂದು ಬರೆದುಕೊಂಡಿದ್ದಾರೆ.

ಐದು ವರ್ಷದ ಬಾಲಕನ ಸ್ವರೂಪದಂತಿರುವ ಶ್ರೀರಾಮನ ಮೂರ್ತಿಯನ್ನು ಸೃಷ್ಟಿಸಲು ದೇಶದ ಮೂವರು ಶಿಲ್ಪಿಗಳಿಗೆ ಸೂಚನೆ ಮಾಡಲಾಗಿತ್ತು. ಮೈಸೂರಿನ ಅರುಣ್‌ ಯೋಗಿರಾಜ್‌, ಬೆಂಗಳೂರಿನ ಜಿ.ಎಲ್‌ ಭಟ್ ಹಾಗೂ ರಾಜಸ್ಥಾನದ ಸತ್ಯನಾರಾಯಣ ಪಾಂಡೆ ತಾವು ರಚಿಸಿದ ಮೂರ್ತಿಗಳನ್ನು ಟ್ರಸ್ಟ್‌ ಗೆ ಒಪ್ಪಿಸಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!