spot_img
Saturday, April 18, 2026
spot_img

ರಾಮ ಮಂದಿರ ನಿರ್ಮಾಣಕ್ಕಾಗಿ ಹೋರಾಡಿದವರನ್ನು ಜೈಲಿಗಟ್ಟುವ ಕಾಂಗ್ರೆಸ್ ಸರ್ಕಾರದ ಕ್ರಮ ಹಿಂದೂ ದ್ವೇಷಿ ಮನಸ್ಥಿತಿ : ವಿಜಯೇಂದ್ರ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ‘ಐದು ಶತಮಾನಗಳ ಭಾರತೀಯರ ಹೋರಾಟ, ವಿಶ್ವದ ಕೋಟ್ಯಾಂತರ ಹಿಂದೂಗಳಕನಸು ಅಯೋಧ್ಯೆಯಲ್ಲಿ ನನಸಾಗುವ ಕ್ಷಣ ಸನ್ನಿಹಿತವಾಗುತ್ತಿರುವ’ ಸಂದರ್ಭದಲ್ಲಿ, ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹೋರಾಡಿದವರನ್ನು ಜೈಲಿಗಟ್ಟುವ ಕಾಂಗ್ರೆಸ್ ಸರ್ಕಾರದ ಕ್ರಮ ಹಿಂದೂ ದ್ವೇಷಿ ಹಾಗೂ ರಾಮ ಮಂದಿರ ನಿರ್ಮಾಣದ ವಿರೋಧಿ ಮನಸ್ಥಿತಿಯನ್ನು ಸಾಬೀತು ಪಡಿಸಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಕಿಡಿ ಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಶ್ರೀರಾಮ ಮಂದಿರದ ಹೋರಾಟದಲ್ಲಿ ಭಾಗಿಯಾಗಿದ್ದ ಕರ ಸೇವಕರನ್ನು ಬಂಧಿಸಿದ ವಿಚಾರಕ್ಕೆ ಸಂಬಂಧಿಸಿ ವಿಜಯೇಂದ್ರ ಟೀಕೆ ಮಾಡಿದ್ದು, ಹುಬ್ಬಳ್ಳಿಯಲ್ಲಿ ರಾಮಮಂದಿರ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು 31 ವರ್ಷಗಳ ಬಳಿಕ ಬಂಧನ ಹಾಗೂ ಉಳಿದ ಹೋರಾಟಗಾರರನ್ನು ಬಂಧಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಕಾನೂನಿನ ಹೆಸರಲ್ಲಿ ರಾಮ ಭಕ್ತರ ಮೇಲೆ ಸೇಡು ತೀರಿಸಿಕೊಳ್ಳುವ ವಿಕೃತ ಮನಸ್ಥಿತಿಯನ್ನು ಪ್ರತಿಬಿಂಬಿಸಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸಾವಿರಾರು ಗಂಭೀರ ಕ್ರಿಮಿನಲ್ ಹಾಗೂ ದೇಶ ದ್ರೋಹಿ ಪ್ರಕರಣಗಳು ಮಂದಗತಿಯ ತನಿಖೆಯಿಂದ ದಶಕಗಳಿಂದಲೂ ಧೂಳು ಹಿಡಿಯುತ್ತಿವೆ. ಇದ್ಯಾವುದರತ್ತಲೂ ಗಮನ ಹರಿಸದೇ ರಾಮ ಭಕ್ತರನ್ನೇ ಗುರಿಯನ್ನಾಗಿಸಿಕೊಂಡಿರುವ ಸಿದ್ದರಾಮಯ್ಯ ಅವರ ಸರ್ಕಾರ ಸಮಾಜಕ್ಕೆ ಯಾವ ಸಂದೇಶ ಕೊಡಲು ಹೊರಟಿದೆ? ಶ್ರೀರಾಮ ಮಂದಿರ ನಿರ್ಮಾಣದ ವಿರುದ್ಧ ಪಿತೂರಿ ನಡೆಸಿದವರು ಏನಾದರು? ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು, ರಾಮಭಕ್ತರ ಮೇಲೆ ದೌರ್ಜನ್ಯ ನಡೆಸಿದ ಸರ್ಕಾರಗಳು ಏನಾದವು? ಎಂಬುದನ್ನು ಇನ್ನೂ ಬುದ್ದಿ ಕಲಿಯದ ಕಾಂಗ್ರೆಸ್ಸಿಗರು ಇತಿಹಾಸವನ್ನೊಮ್ಮೆ ಮೆಲುಕು ಹಾಕಲಿ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!