spot_img
Saturday, April 18, 2026
spot_img

ರಾಮ ಮಂದಿರ ಕರಸೇವಕರ ಬಂಧನ : ತಪ್ಪು ಮಾಡಿದವರಿಗೆ ಏನು ಮಾಡಬೇಕು ? ಸುಮ್ಮನೆ ಬಿಟ್ಟು ಬಿಡಬೇಕಾ ? : ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಕೊಪ್ಪಳ) : ಹಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಪ್ಪು ಮಾಡಿದವರಿಗೆ ಏನು ಮಾಡಬೇಕು ? ಸುಮ್ಮನೆ ಬಿಟ್ಟು ಬಿಡಬೇಕಾ ? ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡುವುದಕ್ಕೆ ಪೊಲೀಸರಿಗೆ ಸೂಚಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ವಿರೋಧ ಪಕ್ಷದ ಆರೋಪಗಳಿಗೆ ಪ್ರತಿಕ್ರಿಸಿದ ಅವರು, ದ್ವೇಷದ ರಾಜಕಾರಣವನ್ನು ನಾವು ಮಾಡುವುದಿಲ್ಲ. ಪೊಲೀಸರು ನ್ಯಾಯಾಲದ ನಿರ್ದೇಶನದ ಅನ್ವಯ ಕ್ರಮ ಕೈಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಉಡುಪಿ ಶಾಸಕ ಯಶಪಾಲ್‌ ಸುವರ್ಣ ಅಯೋಧ್ಯೆ ಶ್ರೀರಾಮ ಮಂದಿರದ ಉದ್ಘಾಟನೆಯ ದಿನ ಸಾರ್ವತ್ರಿಕ ರಜೆ ಘೋಷಿಸುವಂತೆ ಒತ್ತಾಯಿಸಿರುವುದಕ್ಕೆ ಸ್ಪಂದಿಸಿ, ಕೇಂದ್ರ ಸರ್ಕಾರ ಕಾರ್ಯಕ್ರಮ ಮಾಡುತ್ತಿದೆ. ಕೇಂದ್ರವೇ ರಜೆ ಘೋಷಿಸಲಿ ಎಂದು ಅವರು ತಿರುಗೇಟು ನೀಡಿದ್ದಾರೆ.

ಶ್ರೀರಾಮ ಭಕ್ತರಿಗೆ ಮಾತ್ರ ಆಹ್ವಾನ ನೀಡಿದ್ದಾರೆ ಎನ್ನುವ ಕೆಲ ಅರ್ಚಕರ ಹೇಳಿಕೆಗೆ ಉತ್ತರಿಸಿದ ಅವರು, ಯಾರಿಗೆ ಆಹ್ವಾನ ಬಂದಿದೆಯೋ ಇಲ್ಲವೋ, ಯಾರಿಗೆ ಆಹ್ವಾನ ಕೊಟ್ಟಿದ್ದಾರೋ, ಯಾರಗೆ ಆಹ್ವಾನ ಕೊಟ್ಟಿಲ್ಲಗವೋ ನನಗೆ ಗೊತ್ತಿಲ್ಲ. ಅಯೋಧ್ಯೆಗೆ ಯಾರು ಹೋಗುತ್ತಾರೋ ಹೋಗಲಿ, ಯಾರೂ ಬಿಡುತ್ತಾರೋ ಬಿಡಲಿ ಎಂದು ಅವರು ಹೇಳಿದ್ದಾರೆ.

ಇನ್ನು, ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರ ಸೇವೆ ಕಾಯಂ ಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತಿರುವ ವಿಚಾರಕ್ಕೆ ಸ್ಪಂದಿಸಿ, ಉಪನ್ಯಾಸಕರ ಸಂಘದವರ ಜೊತೆ ಈಗಾಗಲೇ ಮಾತನಾಡಿದ್ದೇವೆ. ಆದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಅವರು ನೌಕರಿ ಕಾಯಂ ಮಾಡುತ್ತಿದ್ದಾರೆ. ಅದು ಕಷ್ಟವಿದೆ ಎಂದಿದ್ದಾರೆ.

ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ತಲಾ ಎರಡು ಸಾವಿರ ರೂಪಾಯಿ ಬರ ಪರಿಹಾರ ಘೋಷಿಸಿದೆ. ರೈತರ ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ಆದಷ್ಟು ಬೇಗ ಪ್ರಾರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!