spot_img
Wednesday, January 22, 2025
spot_img

ಅವಿಭಜಿತ ಆಂಧ್ರಪ್ರದೇಶದ ಮಾಜಿ ಸಿಎಂ ವೈ.ಎಸ್. ರಾಜಶೇಖರ ರೆಡ್ಡಿ ಪುತ್ರಿ ಶರ್ಮಿಳಾ ಈ ವಾರ ಕಾಂಗ್ರೆಸ್‌ಗೆ ಸೇರ್ಪಡೆ | ಜಗನ್‌ ವಿರುದ್ಧ ಸೆಣಸಲು ಕಾಂಗ್ರೆಸ್‌ ತಂತ್ರ !

ಜನಪ್ರತಿನಿಧಿ ವಾರ್ತೆ (ಆಂದ್ರ ಪ್ರದೇಶ ) : ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಜನವರಿ 4 ರಂದು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುವ  ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿ, ರಾಜ್ಯದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪ್ರಾಬಲ್ಯವನ್ನು ಸೋಲು ಅನುಭವಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.

ಏತನ್ಮಧ್ಯೆ, ವೈಎಸ್ ಶರ್ಮಿಳಾ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಪಕ್ಷದ ಎಲ್ಲಾ ನಾಯಕರೊಂದಿಗೆ ಸಭೆ ಕರೆದಿದ್ದು, ಸಭೆಯಲ್ಲಿ ಕಾಂಗ್ರೆಸ್‌ ನೊಂದಿಗೆ ಪಕ್ಷ ವಿಲೀನ ಮತ್ತು ಮುಂದಿನ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ತೆಲಂಗಾಣದಲ್ಲಿ ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳ ಮೊದಲು ವೈಎಸ್ ಶರ್ಮಿಳಾ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದ್ದಾರೆ. 

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಅವಕಾಶವಿರುವುದರಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

“ಕೆಸಿಆರ್ ಅವರು ತಮ್ಮ 9 ವರ್ಷಗಳ ಅಧಿಕಾರಾವಧಿಯಲ್ಲಿ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಮತ್ತು ಕೆಸಿಆರ್ ಅಧಿಕಾರಕ್ಕೆ ಬರುವುದು ನನಗೆ ಇಷ್ಟವಿಲ್ಲ ಎಂಬ ಏಕೈಕ ಕಾರಣಕ್ಕಾಗಿ. ವೈಎಸ್ಆರ್ ಅವರ ಮಗಳಾಗಿ ನಾನು ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇನೆ. 55ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಾನು ಕಾಂಗ್ರೆಸ್ ಮತಬ್ಯಾಂಕ್ ಮೇಲೆ ಪರಿಣಾಮ ಬೀರಲಿದ್ದೇನೆ ಎಂದು ಶರ್ಮಿಳಾ ಹೇಳಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಇಂಡಿಯಾ ಟುಡೇ ವರದಿ ಮಾಡಿದೆ.

ಇನ್ನು, ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಪುತ್ರಿ, ವೈಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಈ ವಾರ ಕಾಂಗ್ರೆಸ್ ಸೇರಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ ಎಂದೂ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಆಂಧ್ರಪ್ರದೇಶದ ಕಾಂಗ್ರೆಸ್ ನೇತೃತ್ವವನ್ನು ಶರ್ಮಿಳಾ ಅವರಿಗೆ ನೀಡಲು ಕಾಂಗ್ರೆಸ್ ಹೈಕಾಂಡ್ ಮುಂದಾಗಿದೆ ಎನ್ನಲಾಗಿದ್ದು, ತಮ್ಮ ಸಹೋದರ, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ಸೆಣಸಲು ಶರ್ಮಿಳಾ ತಯಾರಾಗಿದ್ದಾರೆ ಎನ್ನಲಾಗಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!