spot_img
Wednesday, January 22, 2025
spot_img

ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ …. : ಬಿಜೆಪಿ ಹೇಳಿದ್ದೇನು ?

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಹಲವು ಬಾರಿ ಮನವಿ ಮಾಡಿದರೂ ದೇವಸ್ಥಾನದ ಗರ್ಭಗುಡಿ ಪ್ರವೇಶ ಮಾಡುವುದಕ್ಕೆ ನಿರಾಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಡಿಯೋ ತುಣುಕೊಂದನ್ನು ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿರೋಧ ಪಕ್ಷ ಬಿಜೆಪಿ, ಸಿಎಂ ವಿರುದ್ಧ ಆಕ್ರೋಶ ಹೊರ ಹಾಕಿದೆ.

ಈ ಬಗ್ಗೆ ಟೀಕಿಸಿದ ಬಿಜೆಪಿ,  ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ನೀಡಿ, ರಾಮಮಂದಿರಕ್ಕೆ ಒಂದು ರೂ.ಗಳನ್ನು ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು. ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ ಎಂದಿದೆ.

ಮಾತ್ರವಲ್ಲದೇ, ಸಿಎಂ ಸಿದ್ದರಾಮಯ್ಯನವರೇ, ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಂಡು ಫೋಸು ಕೊಡುವ ನಿಮಗೆ, ದೇವಿಯ ಬಳಿ ನಾಡಿನ ಒಳಿತಿಗಾಗಿ ಭಕ್ತಿಯಿಂದ ಕೈ ಮುಗಿಯುವಷ್ಟು ಸಮಯವಿಲ್ಲ. ಹಿಂದೂ ಧರ್ಮ, ಹಿಂದೂ ದೈವ ಹಾಗೂ ಹಿಂದೂಗಳನ್ನು ಕಂಡರೆ ಈ ಪರಿ ಅಸಡ್ಡೆ ಏಕೆ..? ಎಂದು ಪ್ರಶ್ನಿಸಿದೆ. 

39 ಸೆಕೆಂಡುಗಳ ಈ ವಿಡಿಯೋದಲ್ಲಿ, ಸಿಎಂ ಸಿದ್ದರಾಮಯ್ಯ ದೇವಾಲಯದ ಪ್ರವೇಶದ್ವಾರದ ಬಳಿ ನಿಂತಿರುವುದನ್ನು ಕಾಣಬಹುದಾಗಿದೆ. ಅಲ್ಲಿಂದ ಅವರನ್ನು ಗರ್ಭಗುಡಿಗೆ ಬರುವಂತೆ ಮನವಿ ಮಾಡಿದರೂ, ಅವರು ಪ್ರವೇಶಿಸಲು ನಿರಾಕರಿಸುತ್ತಾರೆ. ಅವರ ಬದಲಿಗೆ ಅವರು ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ ಅವರನ್ನು ದೇವಸ್ಥಾನದ ಒಳಗೆ ಕಳುಹಿಸುತ್ತಾರೆ. ಒಳಗೆ ಬಂದ ಪಾಟೀಲ್ ಸಹ ಸಿಎಂಗೆ ಮನವಿ ಮಾಡಿದರೂ, ಅವರು ಒಳಗೆ ಬರಲು ನಿರಾಕರಿಸಿ, ದ್ವಾರದಲ್ಲೇ ನಿಂತು ಕೈ ಮುಗಿದು, ಬೇಡ ಬೇಡ ಅಥವಾ ಬರಲ್ಲ ಎಂದು ಸಿದ್ದರಾಮಯ್ಯ ಕೈ ಸನ್ನೆ ಮಾಡಿರುವುದನ್ನು ಬಿಜೆಪಿ ಹಂಚಿಕೊಂಡಿರುವ ವೀಡಿಯೋದಲ್ಲಿ ಕಾಣಬಹುದಾಗಿದೆ.  

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!