Sunday, September 8, 2024

ಶ್ರೀರಾಮ ಮಂದಿರದ ಆಹ್ವಾನವನ್ನು ತಿರಸ್ಕರಿಸಿದ ಸಿಪಿಐ(ಎಂ) ವಿರುದ್ಧ ಯತ್ನಾಳ್‌ ಆಕ್ರೋಶ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಬರುವ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯ ಆಹ್ವಾನವನ್ನು ಸಿಪಿಐ(ಎಂ) ತಿರಸ್ಕರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಮ್ಯುನಿಸ್ಟರಿಗೆ ಕೇವಲ ‘ಕೊಲೆಗಾರ ಬೇಕು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.  

ಈ ಬಗ್ಗೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಆಕ್ರೋಶ ವ್ಯಕ್ತ ಪಡಿಸಿದ ಯತ್ನಾಳ್‌, ಸಿಪಿಐ(ಎಂ)ನ ಪೋಸ್ಟ್ ಅನ್ನು ಸಹ ಹಂಚಿಕೊಳ್ಳುವುದರ ಜೊತೆಗೆ, ರಾಮ ಜನ್ಮಭೂಮಿಯ ಉದ್ಘಾಟನೆಗೆ ನೀಡಿದ ಆಮಂತ್ರಣವನ್ನು ಸಾರಾಸಗಟಾಗಿ ತಿರಸ್ಕರಿಸಿದ ಕಮ್ಮುನಿಸ್ಟ್ ಪಕ್ಷವು, ಸುಮಾರು ನಾಲ್ಕು ಕೋಟಿಗೂ ಹೆಚ್ಚು ಜನರನ್ನು ದಾರುಣವಾಗಿ ಕೊಂದ ನಿರಂಕುಶ ಪ್ರಭುತ್ವವಾದಿ ಮಾವೋ ಝಡೊನ್ಗ್ ಅವರ ಜಯಂತಿ ನೆನಪಿನಾರ್ಥವಾಗಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ. ಕಮ್ಯುನಿಷ್ಟರಿಗೆ ಶ್ರೀ ರಾಮ ದೇವರು ಬೇಕಿಲ್ಲ, ಆದರೆ ಒಬ್ಬ ಕೊಲೆಪಾತಕ ಬೇಕು’ ಎಂದಿದ್ದಾರೆ.

‘ಮಹಾನ್ ಕ್ರಾಂತಿಕಾರಿ ಮಾವೋ ಅವರ ಜನ್ಮ ವಾರ್ಷಿಕೋತ್ಸವದಂದು ನಾವು ನಮಸ್ಕರಿಸುತ್ತೇವೆ. ಅವರ ನಾಯಕತ್ವದಲ್ಲಿ ಚೀನೀ ಕಮ್ಯುನಿಸ್ಟ್ ಪಕ್ಷ ಮತ್ತು ಚೀನಾದ ಜನರು ಜನರ ಪ್ರಜಾಪ್ರಭುತ್ವ ಕ್ರಾಂತಿಯನ್ನು ಯಶಸ್ವಿಯಾಗಿ ನಡೆಸಲು ಸಾಧ್ಯವಾಯಿತು’ ಎಂದು ಸಿಪಿಐ(ಎಂ) ಎಕ್ಸ್‌ ನಲ್ಲಿ ಪೋಸ್ಟ್‌ ಮೂಲಕ ಹೇಳಿದೆ.  

ಕಳೆದ ತಿಂಗಳಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಶ್ರೀರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದ್ದರು.

‘ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಮ್ ಯೆಚೂರಿ ಅವರಿಗೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಬರುವಂತೆ ಆಹ್ವಾನ ಬಂದಿದೆ. ಧಾರ್ಮಿಕ ನಂಬಿಕೆಗಳನ್ನು ಗೌರವಿಸುವುದು ಮತ್ತು ಪ್ರತಿಯೊಬ್ಬ ವ್ಯಕ್ತಿಯ ನಂಬಿಕೆಯನ್ನು ಮುಂದುವರಿಸುವ ಹಕ್ಕುಗಳನ್ನು ಕಾಪಾಡುವುದು ಪಕ್ಷದ ನೀತಿಯಾಗಿದೆ’ ಎಂದು ಪಕ್ಷವು ಡಿಸೆಂಬರ್ 26, 2023 ರಂದು ಹೇಳಿಕೆಯಲ್ಲಿ ತಿಳಿಸಿತ್ತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!