spot_img
Saturday, April 18, 2026
spot_img

ಅರವಿಂದ್‌ ಕೇಜ್ರಿವಾಲ್‌ ಬಂಧನ ಸಾಧ್ಯತೆ ! ದೆಹಲಿ ಪೊಲೀಸರಿಂದ ಸಿಎಂ ನಿವಾಸದ ರಸ್ತೆ ತಡೆ : ಆಪ್‌ ಆರೋಪ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ಇಡಿ (ಜಾರಿ ನಿರ್ದೇಶನಾಲಯ) ದಾಳಿ ನಡೆಸಿ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷ ಹೇಳಿಕೊಂಡಿದೆ.  

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದರೂ ವಿಚಾರಣೆಗೆ ದೆಹಲಿ ಮುಖ್ಯಮಂತ್ರಿ ಕೇಜ್ರೀವಾಲ್ ಗೈರಾಗಿದ್ದರು. ಈಗ ಇದೇ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ, ಅವರ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಪ್ರವೇಶಿಸದಂತೆ ದೆಹಲಿ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. 

ಕೇಜ್ರಿವಾಲ್ ಗೆ ಈ ಹಿಂದೆಯೂ ನ.02 ಹಾಗೂ ಡಿ.21 ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಲಾಗಿತ್ತು. ತನಿಖಾ ಸಂಸ್ಥೆಯಿಂದ ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಯಲಿದೆ. ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ, ಸಚಿವ ಅತಿಶಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನು, 2024 ರ ಲೋಕಸಭಾ ಚುನಾವಣೆಯಲ್ಲಿ ಕೇಜ್ರಿವಾಲ್ ಪ್ರಚಾರ ಮಾಡದಂತೆ ತಡೆಯುವ ದುರುದ್ದೇಶದಿಂದ ಇವನ್ನೆಲ್ಲಾ ಮಾಡಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!