Sunday, September 8, 2024

ಖರ್ಗೆ, ರಾಹುಲ್‌ ನೇತೃತ್ವದಲ್ಲಿ ವೈಎಸ್‌ ಶರ್ಮಿಳಾ ಜಾತ್ಯತೀತ ತತ್ವ ಮೆಚ್ಚಿ ಕಾಂಗ್ರೆಸ್‌ಗೆ ಸೇರ್ಪಡೆ !

ಜನಪ್ರತಿನಿಧಿ ವಾರ್ತೆ (ನವ ದೆಹಲಿ) :  ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರ ಸಹೋದರಿ ಹಾಗೂ ವೈಎಸ್‌ಆರ್‌ ತೆಲಂಗಾಣ ಸಂಸ್ಥಾಪಕಿ ವೈ.ಎಸ್‌ ಶರ್ಮಿಳಾ ಅವರು ಇಂದು (ಗುರುವಾರ) ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡಿದ್ದಾರೆ. ಜೊತೆಗೆ ತಮ್ಮ ಪಕ್ಷವನ್ನೂ ಕಾಂಗ್ರೆಸ್‌ ಜೊತೆಗೆ ವಿಲೀನ ಮಾಡಿದ್ದಾರೆ.

ಇತ್ತೀಚೆಗೆ ಶರ್ಮಿಳಾ ಪಕ್ಷದ ಸಬೆಯೊಂದನ್ನು ಕರದಿದ್ದರು. ಸಭೆಯಲ್ಲಿ ಪಕ್ಷದ ನಾಯಕರೊಂದಿಗೆ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನ ಮಾಡಿಕೊಳ್ಳುವುದರ ಬಗ್ಗೆಯೂ ಚರ್ಚೆ ನಡೆಸಿದ್ದರು ಎನ್ನುವ ವರದಿಯೂ ಬಂದಿತ್ತು.

ಇಲ್ಲಿನ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಬೆಳಗ್ಗೆ ನಡೆದ ಪಕ್ಷ ಸೇರ್ಪಡೆ ಕಾರ್ಕ್ರಮದಲ್ಲಿ ವೈ ಎಸ್‌ ಶರ್ಮಿಳ ಅವರಿಗೆ ಕಾಂಗ್ರೆಸ್‌ ಶಾಲನ್ನು ಹಾಕುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾಋಜುನ್‌ ಖರ್ಗೆ ಹಾಗೂ ರಾಹುಲ್‌ ಗಾಂಧಿ ಪಕ್ಷಕ್ಕೆ ಅವರನ್ನು ಸ್ವಾಗತಿಸಿದ್ದಾರೆ.

ಜಾತ್ಯತೀತ ತತ್ವಕ್ಕೆ ಕಾಂಗ್ರೆಸ್‌ ಸೇರ್ಪಡೆ : ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಗೊಂಡು ಮಾತನಾಡಿದುವ ಶರ್ಮಿಳಾ, ಇಂದು ವೈಆರ್‌ಎಸ್‌ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ ಜೊತೆಗೆ ವಿಲೀನ ಮಾಡಿದ್ದೇವೆ. ಇಂದಿನಿಂದ ಅದು ಕಾಂಗ್ರೆಸ್‌ ಪಕ್ಷವಾಗಿ ಮುಂದುವರಿಯಲಿದೆ. ತೆಲಂಗಾಣದ ಅಭಿವೃದ್ಧಿಗೆ ಸರ್ಕಾರದ ಜೊತೆಗೂಡಿ ಕೆಲಸ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ದೇಶದ ಅತಿದೊಡ್ಡ ಜಾತ್ಯತೀತ ಪಕ್ಷವಾಗಿದೆ. ಸಮಾಜದ ಎಲ್ಲಾ ವರ್ಗದ ಜನರಿಗಾಗಿ ನಾವು ಶ್ರಮಪಡುತ್ತೇವೆ. ದೇಶದಲ್ಲಿ ನಡೆಯುತ್ತಿರುವ ಕೆಲ ಘಟನೆಗಳು ನನ್ನನ್ನು ಬೇಸರಗೊಳಿಸಿವೆ. ಹೀಗಾಗಿ ನಾನು ಕಾಂಗ್ರೆಸ್‌ ಸೇರಿ ಹೋರಾಟ ಮಾಡಲು ಬಯಸಿದ್ದೇನೆ ಎಂದು ಅವರು ಹೇಳಿದ್ದಾರೆ. ಮಾತ್ರವಲ್ಲದೇ, ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್‌ ಜೋಡೋ ಯಾತ್ರೆ ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಬೀರಿದ ಪ್ರಭಾವದ ಬಗ್ಗೆ ಅವರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!