spot_img
Saturday, April 18, 2026
spot_img

ಶ್ರೀಕಾಂತ್ ಪೂಜಾರಿ 16 ಪ್ರಕರಣದಲ್ಲಿ ಭಾಗಿಯಾಗಿ ಬಿಜೆಪಿ ಅಭ್ಯರ್ಥಿಯಾಗುವ ಮಾನದಂಡಗಳನ್ನು ಪೂರೈಸಿ ಅರ್ಹತೆ ಪಡೆದಿದ್ದಾನೆ! : ಕಾಂಗ್ರೆಸ್‌ ವ್ಯಂಗ್ಯ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ರಾಜ್ಯದಲ್ಲಿ ಶ್ರೀರಾಮ ಮಂದಿರದ ವಿವಾದ ತಾರಕಕ್ಕೆ ಏರಿದೆ.  ಆಢಳಿತಾರೂಢ ಕಾಂಗ್ರೆಸ್‌ ಶ್ರೀರಾಮ ಮಂದಿರ ಹೋರಾಟಲ್ಲಿ ತೊಡಗಿದ ಶ್ರೀಕಾಂತ್‌ ಪೂಜಾರಿಯನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿ ವಿರೋಧ ಪಕ್ಷ ಬಿಜೆಪಿ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ ಮಾಡುತ್ತಿದೆ. ಇದಕ್ಕೆ ಕಾಂಗ್ರೆಸ್‌ ಸರ್ಕಾರ ತಿರುಗೇಟು ನೀಡಿದೆ.

ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್ ಪೂಜಾರಿ 16 ಪ್ರಕರಣದಲ್ಲಿ ಭಾಗಿಯಾಗುವ ಮೂಲಕ ಬಿಜೆಪಿ ಅಭ್ಯರ್ಥಿಯಾಗುವ ಮಾನದಂಡಗಳನ್ನು ಪೂರೈಸಿ ಅರ್ಹತೆ ಪಡೆದಿದ್ದಾನೆ! ಎಂದು ಕಾಂಗ್ರೆಸ್‌ ಬಿಜೆಪಿ ಪ್ರತಿಭಟನೆಯನ್ನು ಟೀಕಿಸಿದೆ.

ಆತನ ಮೇಲೆ ಬಿಜೆಪಿಗೆ ಕಾಳಜಿ, ಪ್ರೀತಿ ಇದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರಕ್ಕೆ ಪ್ರಹ್ಲಾದ್‌ ಜೋಶಿ  ಬದಲು ಶ್ರೀಕಾಂತ್ ಪೂಜಾರಿಗೆ ಟಿಕೆಟ್ ನೀಡಲಿ! ಹೊಸ ಪ್ರತಿಭೆಯನ್ನು ಪರಿಚಯಿಸಲಿ! ಎಂದು ವ್ಯಂಗ್ಯವಾಡಿದೆ.

ಕ್ರಿಮಿನಲ್ ಗಳಿಗೆ, ಕಳ್ಳರಿಗೆ, ಅತ್ಯಾಚಾರಿಗಳಿಗೆ, ರೌಡಿಗಳಿಗೆ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಚಿತ್ತಾಪುರ ಕ್ಷೇತ್ರದಲ್ಲಿ ತೋರಿಸಿಕೊಟ್ಟಿದೆ. ಮೋದಿ ರೌಡಿ ಶೀಟರ್‌ಗೆ ಕೈ ಮುಗಿದು ನಿಲ್ಲುವ ಮೂಲಕ ಸಮಾಜಘಾತುಕ ಶಕ್ತಿಗಳೇ ಬಿಜೆಪಿಯ ಶಕ್ತಿ ಎಂಬುದು ನಿರೂಪಿತವಾಗಿದೆ ಎಂದೂ ಹೇಳಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!