spot_img
Friday, May 8, 2026
spot_img

ಕರಸೇವಕರ ಬಂಧನ ವಿರೋಧಿಸಿ ಏಕಾಂಗಿಯಾಗಿ ಧರಣಿ ಕೂತ ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ ಪೊಲೀಸರ ವಶಕ್ಕೆ !

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ಧರಣಿ ಕುಳಿತ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ರನ್ನು ಪೊಲೀಸರು ಇಂದು (ಗುರುವಾರ) ವಶಕ್ಕೆ ಪಡೆದುಕೊಂಡಿದ್ದಾರೆ.

ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಏಕಾಂಗಿಯಾಗಿ ಶ್ರೀರಾಮ ಮಂದಿರ ಹೋರಾಟದಲ್ಲಿ ತೊಡಗಿದ್ದರು ಎಂದು ಹೇಳಲಾಗುತ್ತಿರುವ ಶ್ರೀಕಾಂತ್‌ ಪೂಜಾರಿ ಅವರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಏಕಾಂಗಿಯಾಗಿ ಧರಣಿ ನಡೆಸಿದರು. ಈ ವೇಳೆ ಪೊಲೀಸರು ವಶಕ್ಕೆ ಸುನೀಲ್‌ ರನ್ನು ಪೊಲೀಸರು ಪಡೆದುಕೊಂಡಿದ್ದಾರೆ.

ಪ್ರತಿಭಟನೆ ವೇಳೆ ಸುನೀಲ್ ಕುಮಾರ್ ಅವರು ‘ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರವನ್ನು ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಥಂ ಆಕ್ರೋಶ ಹೊರ ಹಾಕಿದ್ದಾರೆ.

31 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಎಂಬುವವರನ್ನು ಬಂಧನ ಮಾಡಲಾಗಿದೆ. ಇವರ ವಿರುದ್ಧ ಗಲಭೆ ದೊಂಬಿ, ಅಬಕಾರಿ ಕೇಸ್‌, ಜೂಜಾಟ ಪ್ರಕರಣಗಳು ಇವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳುತ್ತಿದೆ. ಆದರೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲೇ ಇವರ ಬಂಧನ ಮಾಡಿರುವುದು ಯಾಕೆ ಎಂದು ಬಿಜೆಪಿ ಪ್ರಶ್ನಿಸಿ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಪ್ರತಿಭಟಿಸುತ್ತಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!