spot_img
Tuesday, March 24, 2026
spot_img

ನಾನೂ ರಾಮಭಕ್ತ, ರಾಮನಗರದಲ್ಲಿ ರಾಮೋತ್ಸವ ಮಾಡಿಸುವೆ : ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ

ಜನಪ್ರತಿನಿಧಿ ವಾರ್ತೆ ( ಬೆಂಗಳೂರು) :  ಶ್ರೀರಾಮ ಮಂದಿರದ ವಿವಾದ ರಾಜ್ಯದಲ್ಲಿ ತಾರಕಕ್ಕೇರಿದೆ. ರಾಮ ಮಂದಿರದ ಹೋರಾಟದಲ್ಲಿ  ಭಾಗಿಯಾಗಿದ್ದ ಕರಸೇವಕರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿ ಆಡಳಿತಾರೂಢ ಕಾಂಗ್ರೆಸ್‌ ಹಾಗೂ ವಿರೋಧ ಪಕ್ಷ ಬಿಜೆಪಿ ನಡುವೆ ಆರೋಪ ಮತ್ತು ಪ್ರತ್ಯಾರೋಪ ಹೆಚ್ಚಳವಾಗುತ್ತಿದ್ದರೇ, ಇತ್ತ ರಾಮನಗರದ ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಇಂದು (ಗುರುವಾರ) ಅಚ್ಚರಿಯ ಹೇಳಿಕೆ ನೀಡಿದ್ದಾರೆ.

 ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ನಾನೂ ಕೂಡಾ ರಾಮಭಕ್ತ. ನಾನು ರಾಮನನ್ನು ಪೂಜೆ ಮಾಡುತ್ತೇನೆ. ರಾಮನಗರದಲ್ಲಿ ರಾಮೋತ್ಸವ ನಡೆಸಬೇಕು ಎಂದು ಚಿಂತನೆ ಮಾಡಿದ್ದೆವು. ಅದನ್ನ ಭಕ್ತಿ ಪೂರ್ವಕವಾಗಿ ಮಾಡಿಯೇ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ನಾನೂ ರಾಮನ ಭಕ್ತ. ನಾನು ಎಲ್ಲಾ ದೇವರನ್ನು ಪೂಜಿಸುತ್ತೇನೆ. ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡುತ್ತೇನೆ. ರಾಮಮಂದಿರ ವಿಚಾರವನ್ನು ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನ ರಾಜಕೀಯವಾಗಿ ಬಳಸಿಕೊಳ್ಳಲ್ಲ. ಜನರನ್ನ ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇನ್ನು, ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಬದ್ಧತೆ, ಸಿದ್ಧಾಂತ ಇದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಾಡುತ್ತಿದ್ದಾರೋ ಇಲ್ಲವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟಿರುವ ವಿಚಾರ. ಆದರೆ ನಾವು ರಾಮನನ್ನು ಮನೆ ದೇವರು ಎಂದು ಪೂಜೆ ಮಾಡುತ್ತೇವೆ. ಅವರಿಗೆ ರಾಮನ ಪೂಜೆ ಹೊಸದಿರಬಹದು, ಆದರೆ ನಮಗೆ ಹೊಸದೇನಲ್ಲ. ಅದಕ್ಕಾಗಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿಯನ್ನು ಇಕ್ಬಾಲ್  ದೂರಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!