spot_img
Tuesday, March 24, 2026
spot_img

ರಾಜ್ಯ ಕಾಂಗ್ರೆಸ್‌ ನ ಸ್ಥಿತಿ ಇರಲಾರದೆ ಇರುವೆ ಬಿಟ್ಟುಕೊಂಡಂತೆ ಆಗಿದೆ : ಬಿಜೆಪಿ

ಜನಪ್ರತಿನಿಧಿ ವಾರ್ತೆ (ಬೆಂಗಳೂರು ) :  ಅಯೋಧ್ಯೆಯ ಶ್ರೀರಾಮ ಮಂದಿರ ಹೋರಾಟಗಾರರನ್ನು ಬಂಧಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ವಿರೋಧ ಪಕ್ಷ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್‌ ವಿರುದ್ಧ ತಿರುಗಿಬಿದ್ದಿದ್ದು, ʼನಾನೂ ಕರಸೇವಕ ನನ್ನನ್ನೂ ಬಂಧಿಸಿʼ ಎಂಬ ಹೊಸ ಅಭಿಯಾನ ಆರಂಭಿಸಿದೆ. ಇತ್ತ ಆಡಳಿತಾರೂಢ ಕಾಂಗ್ರೆಸ್‌ ಬಂಧನಕ್ಕೆ ಒಳಗಾದವ ಮಟ್ಕಾ, ಜೂಜು ಹಾಗೂ ಹೆಂಡ ದಂಧೆಯಲ್ಲಿ ತೊಡಗಿಸಿಕೊಂಡವ ಹಾಗಾಗಿ ಆತನನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತನ್ನ ನಿಲುವು ಹಾಗೂ ನಿರ್ಧಾರವನ್ನು ಕಾಂಗ್ರೆಸ್‌ ಸಮರ್ಥಿಸಿಕೊಂಡಿದೆ.

ಈ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ಕಾಂಗ್ರೆಸ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, “ರಾಮ ಎಲ್ಲಿಯೋ, ಅಲ್ಲಿ ಕರಸೇವಕನು” ಕರಸೇವಕರಿಗೆ ಅನಗತ್ಯ ಕಿರುಕುಳ ನೀಡುತ್ತಿರುವ ಹಿಂದೂ ವಿರೋಧಿ, ರಾಮ ವಿರೋಧಿ ಕಾಂಗ್ರೆಸ್‌ಗೆ ಕರಸೇವಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ಹೇಳಿದೆ.

ದ್ವೇಷದ ರಾಜಕಾರಣಕ್ಕಾಗಿ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದನ್ನು ಸಹಿಸದೇ ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್ ಪೂಜಾರಿಯವರನ್ನು ಬಂಧಿಸಿದ ಮಾದರಿಯಲ್ಲಿ #ನಾನುಕರಸೇವಕನನ್ನನ್ನೂಬಂಧಿಸಿ ಎಂಬ ಅಭಿಯಾನ ಕರಸೇವಕರಿಂದ ಆರಂಭವಾಗಿದೆ.

ವಿನಾಕಾರಣ ಕರಸೇವಕರ ತಂಟೆಗೆ ಹೋಗಿರುವ ರಾಜ್ಯ ಕಾಂಗ್ರೆಸ್‌ ದ ಸ್ಥಿತಿ ಇರಲಾರದೆ ಇರುವೆ ಬಿಟ್ಟುಕೊಂಡಂತೆ ಆಗಿದೆ ಎಂದೂ ಹೇಳಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!