spot_img
Tuesday, March 24, 2026
spot_img

ಶ್ರೀರಾಮ ಮಂದಿರ | ಗೋಧ್ರಾ ರೀತಿಯ ಹತ್ಯಕಾಂಡದ ಒಳಸುಳಿ ಹರಿಪ್ರಸಾದ್‌ಗೆ ಗೊತ್ತಿರಬಹುದು : ಸಿ.ಟಿ ರವಿ  

ಜನಪ್ರತಿನಿಧಿ ವಾರ್ತೆ( ಕೊಪ್ಪಳ) : ರಾಮ ಮಂದಿರದ ಉದ್ಘಾಟನೆಯ ಸಂದರ್ಭದಲ್ಲಿ ಗೋಧ್ರಾ ಹತ್ಯಕಾಂಡದ ಹಾಗೆ ಮತ್ತೊಂದು ಹತ್ಯಕಾಂಡ ನಡೆಯಬಹುದು ಎಂದು ವಿಧಾನ ಪರಿಷತ್‌ ಸದಸ್ಯ ಬಿ. ಕೆ ಹರಿಪ್ರಸಾದ್‌ ನೀಡಿರುವ ಹೇಳಿಕೆಯನ್ನು ಗಮನಿಸಿದರೇ ಹರಿಪ್ರಸಾದ್‌ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ  ಒಳಸುಳಿ ಗೊತ್ತಿರುವವರಾಗಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದ್ದಾರೆ.

ಅಂಜನಾದ್ರಿಯಲ್ಲಿ ವರದಿಗಾರರಿಗೆ ಸ್ಪಂದಿಸಿದ ಸಿಟಿ ರವಿ, ಮುಖ್ಯಮಂತ್ರಿಗಳು ಯಾರನ್ನು ರಕ್ಷಣೆ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದವರ ಮೇಲಿದ್ದ ಪ್ರಕರಣಗಳನ್ನು ಮುಖ್ಯಮಂತ್ರಿಗಳು ವಾಪಾಸ್‌ ಪಡೆದಿದ್ದಾರೆ ಎಂದು ಅವರು ಆರೋಪಿಸಿದರು.

ಮುಖ್ಯಮಂತ್ರಿಗಳ ಹಿಂಬಾಲಕರು ಆ ರೀತಿಯ ಕೃತ್ಯ ಮಾಡುವ ಸೂಚನೆ ಇರಬೇಕು. ಆ ಕಾರಣಕ್ಕಾಗಿಯೇ ಹರಿಪ್ರಸಾದ್‌ ಆ ರೀತಿಯ ಹೇಳಿಕೆ ಕೊಟ್ಟಿರಬಹುದೆಂದು ರವಿ ಹೇಳಿರುವುದು ಮಾತ್ರವಲ್ಲದೇ, ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಮತ್ತು ರಾಮ ಭಕ್ತರಿಗೆ ರಕ್ಷಣೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಇನ್ನು, ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಮನೆಮನೆಗೆ ತೆರಳಿ ಮಂತ್ರಾಕ್ಷತೆ ನೀಡುತ್ತಿದ್ದಾರೆ. ಇದಕ್ಕೆ ಅನ್ನಭಾಗ್ಯದ ಅಕ್ಕಿ ಬಳಸುತ್ತಿದ್ದಾರೆ ಎಂದು ಕೆಲವು ಕಾಂಗ್ರೆಸ್‌ ನಾಕಕರು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಕೊಡುತ್ತಿರುವ ಐದು ಕೆ.ಜಿ ಅಕ್ಕಿ ಮೇಲೆ ರಾಜ್ಯ ಸರ್ಕಾರ ಒಂದು ಕೆ.ಜಿ ಅಕ್ಕಿ ಕೊಟ್ಟಿಲ್ಲ. ತಾನೆ ಕೊಟ್ಟಿದ್ದು ಎಂದು ಹೇಳುವುದು ದೊಡ್ಡ ಅಹಂಕಾರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಮ ಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗುತ್ತಿದೆ. ಧಾರ್ಮಿಕ ಕಾರ್ಕ್ರಮ ಆಗಿದ್ದರೆ ನಾವೆಲ್ಲರೂ ಹೋಗುತ್ತಿದ್ದೇವು. ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂಊ ಆಗಬಹುದು. ಈ ಬಗ್ಗೆ ನಮಗೆ ಮಾಹಿತಿ ಒದಗಿ ಬದುತ್ತಿದೆ. ಮಾಹಿತಿ ಇದ್ದೇ ಹೇಳುತ್ತಿದ್ದೇನೆ ಎಂದು ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ ಬುಧವಾರ(ಜ.03) ರಂದು ಹೇಳಿಕೆ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!