spot_img
Monday, March 23, 2026
spot_img

ರಾಜ್ಯಸಭೆಗೆ ಆಮ್‌ ಆದ್ಮಿ ಪಕ್ಷದಿಂದ ಡಿಸಿಡಬ್ಲ್ಯೂ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ ಆಯ್ಕೆ !

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ದೆಹಲಿಯಲ್ಲಿ ರಾಜ್ಯಸಭೆಗೆ ಜ.19 ರಂದು ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. 

ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ(ಡಿಸಿಡಬ್ಲ್ಯೂ) ಸ್ವಾತಿ ಮಾಲಿವಾಲ್ ಅವರನ್ನು ಆಮ್ ಆದ್ಮಿ ಪಕ್ಷ ರಾಜ್ಯಸಭೆಗೆ ಆಯ್ಕೆ ಮಾಡಿದೆ. ಈಗಾಗಲೇ ಜೈಲಿನಲ್ಲಿರುವ ಸಂಜಯ್ ಸಿಂಗ್ ಅವರನ್ನು ಮತ್ತೆ ರಾಜ್ಯಸಭೆಗೆ ಕಳಿಸಲು ಆಮ್ ಆದ್ಮಿ ಪಕ್ಷ ತೀರ್ಮಾನಿಸಿದ್ದು, ಆಪ್ ನಿಂದ ಎನ್ ಡಿ ಗುಪ್ತಾ 2 ನೇ ಬಾರಿಗೆ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ. 

ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸಮಿತಿ ಸಭೆ ನಡೆದಿದ್ದು, ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಹಾಲಿ ಸದಸ್ಯ ಸುಶೀಲ್ ಕುಮಾರ್ ಗುಪ್ತಾ ಹರ್ಯಾಣದ ಚುನಾವಣಾ ರಾಜಕಾರಣದತ್ತ ಹೆಚ್ಚಿನ ಗಮನ ಕೇಂದ್ರೀಕರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. 

“ಸುಶೀಲ್ ಕುಮಾರ್ ಗುಪ್ತಾ ಹರಿಯಾಣದ ರೋಮಾಂಚಕ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ತಮ್ಮ ಆಕಾಂಕ್ಷೆಯನ್ನು ತಿಳಿಸಿದ್ದಾರೆ ಹಾಗೂ ಈ ಮಾರ್ಗವನ್ನು ಅನುಸರಿಸುವ ಅವರ ನಿರ್ಧಾರವನ್ನು ನಾವು ಗೌರವಿಸುತ್ತೇವೆ” ಎಂದು ಎಎಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಸಿಂಗ್ ಅವರಿಗೆ ರಾಜ್ಯಸಭೆ ಮರುನಾಮಕರಣಕ್ಕಾಗಿ ದಾಖಲೆಗಳಿಗೆ ಸಹಿ ಹಾಕಲು ದೆಹಲಿ ನ್ಯಾಯಾಲಯ ಅವಕಾಶ ನೀಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!