Sunday, September 8, 2024

ಖ್ಯಾತ ಜಾನಪದ ತಜ್ಙ, ಕವಿ, ಕಥೆಗಾರ ಅಮೃತ ಸೋಮೇಶ್ವರ ಅಸ್ತಂಗತ

ಜನಪ್ರತಿನಿಧಿ ವಾರ್ತೆ (ಮಂಗಳೂರು) : ಖ್ಯಾತ ಜಾನಪದ ತಜ್ಞ, ಕವಿ, ಕಥೆಗಾರ ಪ್ರೊ. ಅಮೃತ ಸೋಮೇಶ್ವರ  ಇಂದು(ಶನಿವಾರ) ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅಮೃತ ಸೋಮೇಶ್ವರ ಅವರಿಗೆ 89 ವರ್ಷ ವಯಸ್ಸಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಕನ್ನಡ, ತುಳು ಸಾಹಿತಿ ಹಾಗೂ ಯಕ್ಷಗಾನ ಪ್ರಸಂಗಕರ್ತರಾಗಿದ್ದ ಅವರು, ಸಮಾಜಮುಖಿ ಚಿಂತನೆ ಉಳ್ಳವರಾಗಿದ್ದ ಅವರು  ಸಹೃದಯಿಯಾಗಿದ್ದರು.

ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ಅವರು 1935 ಸೆಪ್ಟೆಂಬರ್ 27‌ ರಂದು ಜನಿಸಿದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅವರುಯ, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವರೆಗೆ ವಿದ್ಯಾಭ್ಯಾಸ ಮಾಡಿದರು. ಆ ಬಳಿಕ ಆನಂದಾಶ್ರಮ ಪ್ರೌಢಶಾಲೆಯಲ್ಲಿ 6ನೇ ತರಗತಿಯ ಕಲಿಕೆ ಮುಂದುವರಿಸಿದ ಅವರು 1954ರಲ್ಲಿ ಎಸೆಸೆಲ್ಸಿ ಉತ್ತೀರ್ಣರಾದರು.

ಸೋಮೇಶ್ವರ ಅವರು ಅನೇಕ ಜಾನಪದ ಹಾಗೂ ಸಾಹಿತ್ಯ ಕೃತಿಗಳನ್ನು ರಚಿಸಿದ್ದರು. ಸಾಹಿತ್ಯದ ಹೆಚ್ಚಿನ ಒಲವು ಹೊಂದಿದ್ದ ಇವರು ಕಥೆ ಕವನಗಳ ರಚನೆ ಜೊತೆಗೆ ಯಕ್ಷಗಾನ ಪ್ರಸಂಗವನ್ನು ಕೂಡಾ ರಚಿಸಿದ್ದರು. ಸಾಕಷ್ಟು ಧ್ವನಿಸುರುಳಿಗಳಿಗೆ ಸಾಹಿತ್ಯವನ್ನು ಒದಗಿಸಿದ ಹಿರಿಮೆ ಇವರಿಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!