Thursday, November 21, 2024

ಎಂಟು ದಿನಗಳ ಹಿಂದಷ್ಟೆ ವೈಎಸ್‌ಆರ್‌ಸಿಪಿ ಗೆ ಸೇರ್ಪಡೆಗೊಂಡ ಕ್ರಿಕೇಟಿಗ ರಾಯುಡು ಪಕ್ಷಕ್ಕೆ ರಾಜೀನಾಮೆ !

ಜನಪ್ರತಿನಿಧಿ ವಾರ್ತೆ (ಆಂಧ್ರಪ್ರದೇಶ) : ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷಕ್ಕೆ (ವೈಎಸ್‌ಆರ್‌ಸಿಪಿ) ಸೇರ್ಪಡೆಯಾದ ಕೇವಲ ಎಂಟು ದಿನಗಳ ಬಳಿಕ ಕ್ರಿಕೆಟಿಗ, ರಾಜಕಾರಣಿ ಅಂಬಟಿ ರಾಯುಡು ಅವರು ಪಕ್ಷವನ್ನು ತೊರೆಯುವ ನಿರ್ಧಾರವನ್ನು ಇಂದು(ಶನಿವಾರ) ಘೋಷಿಸಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು 45 ದಿನಗಳ ಕ್ರೀಡಾ ಉತ್ಸವ ‘ಅದುಧಮ್ ಆಂಧ್ರ’ (ನಾವು ಆಂಧ್ರದಲ್ಲಿ ಆಡೋಣ) ಅನ್ನು ಪ್ರಾರಂಭಿಸಿದ ಎರಡು ದಿನಗಳ ನಂತರ ಡಿಸೆಂಬರ್ 28 ರಂದು ಮಾಜಿ ಚೆನ್ನೈ ಸೂಪರ್ ಕಿಂಗ್ಸ್ ವಿಕೆಟ್ ಕೀಪರ್-ಬ್ಯಾಟರ್  ಅಂಬಟಿ ರಾಯಡು ವೈಎಸ್‌ಆರ್‌ಸಿಪಿಗೆ ಸೇರ್ಪಡೆಗೊಂಡಿದ್ದರು.

ರಾಯುಡು ಕ್ರೀಡಾ ಉತ್ಸವಕ್ಕೆ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡರೂ ಕ್ರೀಡಾಕೂಟದಲ್ಲಿ ಭಾಗವಹಿಸಲಿಲ್ಲ ಎಂದು ಅಲ್ಲಿನ ಸ್ಥಳೀಯ ಸುದ್ದಿ ಮಾದ್ಯಮಗಳು, ಪತ್ರಿಕೆಗಳು ವರದಿ ಮಾಡಿದ್ದವು.

ಈ ಬಗ್ಗೆ ತಮ್ಮ ಅಧಿಕೃತ ʼಎಕ್ಸ್‌ʼ ಖಾತೆಯ ಮೂಲಕ ಖಚಿತ ಪಡಿಸಿದ ರಾಯುಡು “ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು ತೊರೆಯಲು ಮತ್ತು ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ನಿರ್ಧರಿಸಿದ್ದೇನೆ. ಮುಂದಿನ ಕ್ರಮವನ್ನು ಸೂಕ್ತ ಸಮಯದಲ್ಲಿ ತಿಳಿಸುತ್ತೇನೆ” ಎಂದು ಅವರು ಬರೆದುಕೊಂಡಿದ್ದಾರೆ.

ಗುಂಟೂರಿನ ಮೂಲದವರಾದ ರಾಯುಡು, ವೈಎಸ್‌ಆರ್‌ಸಿಪಿ ಪಕ್ಷಕ್ಕೆ ಸೇರುವ ಮುನ್ನ ಪಕ್ಷದ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು ಮತ್ತು ಅವರು ತಮ್ಮ ಸ್ವಗ್ರಾಮದಲ್ಲಿ ಮೊದಲಿನಿಂದಲೂ ಪಕ್ಷದ ಮುಖಂಡರ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದೆ.

ರಾಯುಡು ಜೂನ್ 2023 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು ಮತ್ತು ರಾಜಕೀಯಕ್ಕೆ ಸೇರುವ ಆಸಕ್ತಿಯನ್ನು ವ್ಯಕ್ತಪಡಿಸಿದರು. 38ರ ಹರೆಯದ ಅವರು ಭಾರತ ಕ್ರಿಕೆಟ್ ತಂಡಕ್ಕಾಗಿ 55 ಏಕದಿನ ಮತ್ತು ಆರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ರಾಯುಡು ತಮ್ಮ 13 ವರ್ಷಗಳ ಐಪಿಎಲ್ ವೃತ್ತಿಜೀವನದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!