spot_img
Friday, March 27, 2026
spot_img

ಆದಿತ್ಯ-L1 ಮಿಷನ್‌ ಸಕ್ಸಸ್‌ : ನಿಗದಿತ ಕಕ್ಷೆ ತಲುಪಿದ ನೌಕೆ | ISRO ಸಾಧನೆಗೆ ಮೋದಿ ಶ್ಲಾಘನೆ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : 110 ದಿನಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೋ ಆದಿತ್ಯ ಎಲ್1 ನೌಕೆಯು ‌15 ಲಕ್ಷ ಕಿಮೀ ಕ್ರಮಿಸಿ ಅಂತಿಮ ಕಕ್ಷೆ ತಲುಪಿದೆ. ಈ ಮೂಲಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಸಜ್ಜಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸಂಶೆ ವ್ಯಕ್ತಪಡಿಸಿದ್ದಾರೆ.

ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC-SHAR) ಆದಿತ್ಯ-L1 ಏಳು ಪೇಲೋಡ್‌ಗಳೊಂದಿಗೆ ಉಡಾವಣೆಗೊಂಡಿತ್ತು. ಭೂಮಿಯಿಂದ ಸುಮಾರು 15 ಲಕ್ಷ ಕಿಮೀ ದೂರದಲ್ಲಿರುವ L1 ಪಾಯಿಂಟ್‌ ಕಡೆಗೆ ಭೂ ಕಕ್ಷೆಯಿಂದ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿತ್ತು. ಶನಿವಾರ ಬೆಳಗ್ಗಿನಿಂದಲೇ ಹಾಲೋ ಆರ್ಬಿಟ್ ಅಳವಡಿಕೆಯ ಕಾರ್ಯವನ್ನು ಮುಂದುವರಿಸಿ ಲಗ್ರೇಂಜ್‌ ಪಾಯಿಂಟ್-1 ರಲ್ಲಿ ಇರಿಸಲು ಪ್ರಾರಂಭಿಸಿತ್ತು. ಅಂದುಕೊಂಡಂತೆ ಆದಿತ್ಯ ಎಲ್‌-1 ನೌಕೆಯು ನಿಗದಿತ ಕಕ್ಷೆ ತಲುಪಿದ್ದು, ದೊಡ್ಡ ಯಶಸ್ಸು ತಂದುಕೊಟ್ಟಿದೆ. 2023ರ ಚಂದ್ರಯಾನ-3 ಯಶಸ್ವಿ ಬಳಿಕ ಇಸ್ರೋ (ISRO) ಸ್ಥಾಪಿಸಿದ ಮಹತ್ವದ ಮೈಲುಗಲ್ಲು ಇದಾಗಿದೆ.

ಇನ್ಮುಂದೆ ಆದಿತ್ಯ L1 ನೌಕೆಯು ನಿಗದಿತ ಕಕ್ಷೆಯಲ್ಲಿ ನಿಂತು ಹಗಲು, ರಾತ್ರಿ ಹಾಗೂ ಗ್ರಹಣಗಳ ಅಡೆತಡೆ ಇಲ್ಲದೇ ಸೂರ್ಯನನ್ನು ನಿರಂತರವಾಗಿ ಅಧ್ಯಯನ ಮಾಡಲಿದೆ. ಸೂರ್ಯನಲ್ಲಿ ನಡೆಯುವ ಚಟುವಟಿಕೆಗಳು ಹಾಗೂ ಅಂತರಿಕ್ಷದ ವಾತಾವರಣದ ಮೇಲೆ ಅದರ ಪರಿಣಾಮವನ್ನು ಅಧ್ಯಯನ ನಡೆಸಲಿದೆ.

ಇಸ್ರೋದ ಮಹತ್ವದ ಸಾಧನೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಹರ್ಷ ವ್ಯಕ್ತಪಡಿಸಿದ ಮೋದಿ, ಭಾರತ ಮತ್ತೊಂದು ಹೆಗ್ಗುರುತನ್ನು ಸೃಷ್ಟಿಸಿದೆ. ಭಾರತದ ಮೊದಲ ಸೌರ ವೀಕ್ಷಣಾಲಯ ಆದಿತ್ಯ-ಎಲ್1 ತನ್ನ ಗಮ್ಯಸ್ಥಾನವನ್ನು ತಲುಪಿದೆ. ಇದು ಅತ್ಯಂತ ಸಂಕೀರ್ಣ ಮತ್ತು ಸಂಕೀರ್ಣವಾದ ಬಾಹ್ಯಾಕಾಶ ಕಾರ್ಯಾಚರಣೆಗಳ ನಡುವೆ ಸಾಕ್ಷಾತ್ಕಾರದಲ್ಲಿ ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಈ ಅಸಾಧಾರಣ ಸಾಧನೆಯನ್ನು ದೇಶದ ಜನತೆಯೊಂದಿಗೆ ಸೇರಿ ಶ್ಲಾಘಿಸುತ್ತೇನೆ. ಜೊತೆಗೆ ಮಾನವ ಪ್ರಯೋಜನಗಳಿಗಾಗಿ ವಿಜ್ಞಾನದ ಅನ್ವೇಷಣೆಗಳನ್ನು ಮುಂದುವರಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!