spot_img
Tuesday, May 12, 2026
spot_img

ಬಿಲ್ಕಿಸ್‌ ಬಾನೋ ಪ್ರಕರಣ : ಅಪರಾಧಿಗಳ ಬಿಡುಗಡೆಗೆ  ಗುಜರಾತ್‌ ಸರ್ಕಾರ ನೀಡಿದ್ದ ಆದೇಶವನ್ನು ರದ್ದು ಪಡಿಸಿದ ಸುಪ್ರೀಂ ಕೋರ್ಟ್‌

ಜನಪ್ರತಿನಿಧಿ ವಾರ್ತೆ ( ನವ ದೆಹಲಿ ) : ಬಿಲ್ಕಿಸ್‌ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಅವರ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ್ದ ಹನ್ನೊಂದು ಮಂದಿ ಅಪರಾಧಿಗಳ ಅವಧಿಪೂರ್ಣ ಬಿಡುಗಡೆಗೆ ಆದೇಶಿಸಿದ್ದ ಗುಜರಾತ್‌ ಸರ್ಕಾರದ ಆದೇಶವನ್ನು ಇಂದು (ಸೋಮವಾರ) ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ.

ಅಪರಾಧಿಗಳ ಬಿಡುಗಡೆಗೆ ಪ್ರಶ್ನಸಿ ಸುಪ್ರೀಂ ಕೋರ್ಟ್‌ ಗೆ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ. ವಿ. ನಾಗರತ್ನ ಹಾಗೂ ಉಜ್ವಲ್‌ ಭುಯಾನ್‌ ಅವರಿದ್ದ ನ್ಯಾಯಪೀಠ ನಡೆಸಿತು. ಗುಜರಾತ್‌ ಸರ್ಕಾರವು ಶಿಕ್ಷೆ ರದ್ದು ಆದೇಶ ಹೊರಡಿಸಿರುವುದು ಸೂಕ್ತವಲ್ಲ ಎಂದು ಪೀಠ ಹೇಳಿದೆ.

2002 ರಲ್ಲಿ ಗೋಧ್ರಾ ರೈಲು ದುರಂತದ ಬಳಿಕ ಗುಜರಾತ್‌ ನಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಪಲಾಯನ ಮಾಡುತ್ತಿದ್ದ ಬಿಲ್ಕಿಸ್‌ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆಗ 21 ವಯಸ್ಸಾಗಿದ್ದ ಅವರು, ಐದು ತಿಂಗಳ ಗರ್ಭಿಣಿಯೂ ಆಗಿದ್ದರು. ಅವರ ಮೂರು ವರ್ಷದ ಮಗಳೂ ಸೇರಿದಂತೆ ಏಳು ಮಂದಿಯನ್ನು ಹತ್ಯೆ ಮಾಡಲಾಗಿತ್ತು.

ಇನ್ನು, ಗುಜರಾತ್‌ ಸರ್ಕಾರದ ಆದೇಶದ ಮೇರೆಗೆ ಎಲ್ಲಾ ಅಪರಾಧಿಗಳು 2022ರ ಆಗಸ್ಟ್‌ 15 ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!