Sunday, September 8, 2024

ವ್ಯಸನ ಅಷ್ಟೆ ಮನರಂಜನೆಯ ಮಾರ್ಗ ಅಲ್ಲ : ಮಂಜುಳಾ ಶೆಟ್ಟಿ

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ | ತಾಲೂಕು ಮಟ್ಟದ ಗುಲಾಬಿ ಆಂದೋಲನ ಜಾಥಾ  ಜನಪ್ರತಿನಿಧಿ ವಾರ್ತೆ (ಕುಂದಾಪುರ) : ಇಂದಿನ ಯುವ ಜನಾಂಗ ವ್ಯವಸನಕ್ಕೆ ಒಳಗಾಗುವುದಷ್ಟನ್ನೇ ಮನರಂಜನೆ ಎಂದು ಭಾವಿಸಿರುವುದು ದುರಂತ. ವ್ಯಸನ ಅಷ್ಟೆ ಮನರಂಜನೆಯ ಮಾರ್ಗ ಅಲ್ಲ ಎಂದು ಉಡುಪಿ ಜಿಲ್ಲಾ ಸರ್ವೇಕ್ಷಣಾ ಘಟಕ(ಎನ್‌ಟಿಸಿಪಿ ವಿಭಾಗ) ಸಲಹೆಗಾರರಾದ ಮಂಜುಳಾ ಶೆಟ್ಟಿ ಹೇಳಿದರು.

ಅವರು, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವವೇಕ್ಷಣಾ ಘಟಕ (ಎನ್‌ಟಿಸಿಪಿ ವಿಭಾಗ), ಮಾದಕ ದ್ರಚ್ಯ ವಿರೋಧಿ ಕ್ಲಬ್‌ ಸರಕಾರಿ ಪದವಿ ಪೂರ್ವ ಕಾಲೇಜಿ, ಕುಂದಾಪುರ, ರೋಟರಿ ಕ್ಲಬ್‌ ಕೋಟೇಶ್ವರ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಕಛೇರಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಘ ಕಾರ್ಯಕ್ರಮದಡಿ ತಾಲೂಕು ಮಟ್ಟದ ಗುಲಾಬಿ ಆಂದೋಲನ ಜಾಥಾ ಹಾಗೂ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ತಂಬಾಕು ಭಾರತದ ಎಲ್ಲ ನಾಗರಿಕರ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ದೊಡ್ಡ ಅಪಾಯವಾಗಿದೆ. ಹೃದಯ ಸಂಬಂಧಿ ಕಾಯಿಲೆಗಳು, ಉಸಿರಾಟದ ಕಾಯಿಲೆಗಳು ಮತ್ತು ಕ್ಯಾನ್ಸರ್ ಸೇರಿದಂತೆ ಹೆಚ್ಚಿನ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬೆಳವಣಿಗೆಗೆ ಇದು ಸಾಮಾನ್ಯ ಅಪಾಯಕಾರಿ ಅಂಶವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಿಗರೇಟ್, ಬೀಡಿ ಮತ್ತು ಹುಕ್ಕಾದಂತಹ ತಂಬಾಕು ಉತ್ಪನ್ನಗಳನ್ನು ಬಳಸಿದಾಗ ಅದರಿಂದ ಉಂಟಾಗುವ ಹೊಗೆಯು ಆ ಸ್ಥಳವನ್ನು ಆವರಿಸಿ ಅಲ್ಲಿರುವ ಜನರು ಅದನ್ನು ಉಸಿರಾಟದ ಮೂಲಕ ಸೇವಿಸುವ ಕಾರಣದಿಂದ ವಯಸ್ಕರಲ್ಲಿ ಪರೋಕ್ಷ ಧೂಮಪಾನ ( ಸೆಕೆಂಡ್ ಹ್ಯಾಂಡ್ ಸ್ಮೂಕ್) ಹೃದಯ ಕಾಯಿಲೆ ಮತ್ತು ಶ್ವಾಸಕೋಶದ ಕ್ಯಾನ್ಸರ್ ಸೇರಿದಂತೆ ಗಂಭೀರ ಹೃದಯ ಮತ್ತು ಉಸಿರಾಟದ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಅವರು ಹೇಳಿದರು.

ಸರ್ಕಾರ ಈಗಾಗಲೇ ಅನೇಕ ಅರಿವು ಮೂಡಿಸುವ ಕಾರ್ಯಮದ ಮೂಲಕ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ನೀಡಿದೆ ಮತ್ತು ಈಗಲೂ ನೀಡುತ್ತಲೇ ಇದೆ. ಗಣನೀಯವಾಗಿ ನಿಯಂತ್ರಣಕ್ಕೆ ಬರುತ್ತಿದೆ. ಇನ್ನೂ ಈ ಅರಿವು ಸಮಾಜದಲ್ಲಿ ಮೂಡಿಸುವ ಉದ್ದೇಶದಿಂದ ಮೃದು ಧೋರಣೆಯಿಂದ ನಡೆದುಕೊಳ್ಳಬೇಕಿದೆ. ಗುಲಾಬಿ ಹೂವಿನ್ನು ನೀಡುವ ಮೂಲಕ ತಂಬಾಕು ನಿಯಂತ್ರಣಕ್ಕೆ ಆಂದೋಲನ ಜಾಥಾ ನಡೆಸಿ ಅರಿವು ಮೂಡಿಸುವ ಪ್ರಯತ್ನ ಮಾಡಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮವನ್ನು ರೋಟರಿ ಕ್ಲಬ್‌ ಕೋಟೇಶ್ವರದ ಅಧ್ಯಕ್ಷ ಜಗದೀಶ್‌ ಮೊಗವೀರ ಮಾರ್ಕೋಡು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ. ಜಿ ಅಧ್ಯಕ್ಷತೆ ವಹಿಸಿದ್ದರು.

ಉಪನ್ಯಾಸಕಿ ಹಾಗೂ ಮಾದಕ ದ್ರವ್ಯ ವಿರೋಧಿ ಕ್ಲಬ್‌ ಸರಕಾರಿ ಪದವಿ ಪೂರ್ವ ಕಾಲೇಜಿನ ಸಂಚಾಲಕಿ ಸಂಧ್ಯಾ ನಾಯಕ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಜಿಲ್ಲಾ ಸರ್ವೇಕ್ಷಣಾ ಘಟಕ ಎನ್‌ಟಿಸಿಪಿ ವಿಭಾಗದ ಸಮಾಜ ಕಾರ್ಯಕರ್ತೆ ಶೈಲಾ ಶಾಮನೂರು ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ಇದರ ಬಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿದರು.

ಸಭಾ ಕಾರ್ಯಕ್ರಮಕ್ಕೂ ಮುನ್ನಾ ತಾಲೂಕು ಮಟ್ಟದ ಗುಲಾಬಿ ಆಂದೋಲನ ಜಾಥಾ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳು ಗುಲಾಬಿ ಹೂ ನೀಡುವ ಮೂಲಕ ಅರಿವು ಮೂಡಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!