spot_img
Saturday, June 13, 2026
spot_img

ಲೋಕಸಭಾ ಚುನಾವಣೆ : ರಾಜ್ಯ ಬಿಜೆಪಿಯಿಂದ ಯೋಜನಾ ಸಭೆ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) :  ಲೋಕಸಭಾ ಚುನಾವಣೆಗೆ ಈಗಾಗಲೇ ರಾಜ್ಯ ಬಿಜೆಪಿ ರಣತಂತ್ರ ಹೂಡಲಾರಂಭಿಸಿದ್ದು, ಇಂದು (ಸೋಮವಾರ) ಯೋಜನಾ ಸಭೆ ನಡೆಸಿದೆ.

ಲೋಕಸಭಾ ಚುನಾವಣೆಯ ಯೋಜನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ರಜ್ಯ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಮುಂಬರುವ ಲೋಕಸಭಾ ಚುನಾವಣೆಯ ಕುರಿತು ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ವಿವರಿಸಿದರು ಹಾಗೂ ಸಂಘಟನಾತ್ಮಕ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.  ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತೆಯ ಬಗ್ಗೆ ಪಕ್ಷದ ಮುಖಂಡರುಗಳಿಂದ ಅಭಿಪ್ರಾಯ ಸ್ವೀಕಾರ ಮಾಡಿದರು.

ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್‌ ಯಡಿಯೂರಪ್ಪ, ಡಿ. ವಿ ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಅರುಣ್‌ ಸಿಂಗ್, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಪ್ರತಿಪಕ್ಷ ನಾಯಕರಾದ ಆರ್‌ ಅಶೋಕ್, ಪರಿಷತ್ ವಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್‌ ಜಿ.ವಿ , ಪಕ್ಷದ ಹಿರಿಯರು, ಮಾಜಿ ಸಚಿವರು, ಶಾಸಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!