Sunday, September 8, 2024

ಫೆಬ್ರವರಿ 24 ಹಾಗೂ 25ರಂದು ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು(ಸೋಮವಾರ) ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶದ ಆಯೋಜನೆ ಕುರಿತ ಪೂರ್ವಾಭಾವಿ ಸಭೆ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,  ಸಂವಿಧಾನ ಜಾರಿಗೆ ಬಂದು 75 ವರ್ಷಾಚರಣೆಯ ಅಂಗವಾಗಿ “ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ”ವನ್ನು Institute of Social and Economic Change (ISEC), National Law School of India University, Bengaluru ಇವರ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿದೆ. ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಅರಿವು ಮೂಡಿಸುವುದು ಹಾಗೂ ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವುದು ಸಮಾವೇಶದ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಸಮಾವೇಶಕ್ಕೆ ಪೂರ್ವಭಾವಿಯಾಗಿ ಜನವರಿ 26 ರಿಂದ “ಸಂವಿಧಾನ  ಜಾಗೃತಿ ಜಾಥಾ” ಆಯೋಜಿಸಲಾಗುವುದು. ಈ ಜಾಥಾವು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಸಂವಿಧಾನದ ಮಹತ್ವ, ರಾಷ್ಟ್ರೀಯ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಗುವುದು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಫೆಬ್ರವರಿ 24 ಹಾಗೂ 25ರಂದು ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ವಿಚಾರ ಸಂಕಿರಣ ಹಾಗೂ KREIS ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಲಾಗುವುದು. ಸಮಾರೋಪ ಸಮಾರಂಭದಲ್ಲಿ ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ವಿವಿಧ ವಿಷಯಗಳ ಕುರಿತ ಪರಿಣತರ ಚರ್ಚೆಯನ್ನು ಆಧರಿಸಿ, ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು, ಇಂದಿನ ಸಮಾಜ ಎದುರಿಸುತ್ತಿರುವ ಎಲ್ಲ ಸಮಸ್ಯೆ, ಸವಾಲುಗಳಿಗೆ ಸಂವಿಧಾನದಲ್ಲಿ ಉತ್ತರವಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಸಮಾವೇಶದಲ್ಲಿ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸಿ, ಅತ್ಯುತ್ತಮ ಚರ್ಚಾಗೋಷ್ಠಿಗಳನ್ನು ಆಯೋಜಿಸುವಂತೆ ಇಂದಿನ ಪೂರ್ವಾಭಾವಿ ಸಭೆಯಲ್ಲಿ ಅವರು ಸೂಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!