spot_img
Friday, April 17, 2026
spot_img

ಬಿಲ್ಕಿಸ್‌ ಬಾನೋ ಪ್ರಕರಣ : ಸುಪ್ರೀಂ ತೀರ್ಪಿನಿಂದ ಅಪರಾಧಿಕಗಳ ರಕ್ಷಕರು ಯಾರೆಂದು ಬಹಿರಂಗ : ರಾಗಾ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) :  ಬಿಲ್ಕಿಸ್‌ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಅವರ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ್ದ ಹನ್ನೊಂದು ಮಂದಿ ಅಪರಾಧಿಗಳ ಅವಧಿಪೂರ್ಣ ಬಿಡುಗಡೆಗೆ ಆದೇಶಿಸಿದ್ದ ಗುಜರಾತ್‌ ಸರ್ಕಾರದ ಆದೇಶವನ್ನು ಇಂದು (ಸೋಮವಾರ) ಸುಪ್ರೀಂ ಕೋರ್ಟ್‌ ರದ್ದುಪಡಿಸಿದ ಬೆನ್ನಿಗೆ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಹರಿಹಾಯ್ದಿದ್ದು, ʼಅಪರಾಧಿಗಳನ್ನು  ಯಾರು ರಕ್ಷಣೆ ಮಾಡುತ್ತಿದ್ದಾರೆ ಎನ್ನುವುದು ಈ ತೀರ್ಪು ತೋರಿಸುತ್ತದೆ ಎಂದಿದ್ದಾರೆ.

ತಮ್ಮ ಅಧಿಕೃತ ʼಎಕ್ಸ್‌ʼ ಖಾತೆಯ ಮೂಲಕ ಆಕ್ರೋಶ ಹೊರ ಹಾಕಿದ ರಾಹುಲ್‌, ಚುನಾವಣಾ ಲಾಭಕ್ಕೋಸ್ಕರ ನ್ಯಾಯವನ್ನೇ ಕೊಲೆಗೈಯುವುದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಮಾರಕ. ಅಪರಾಧಿಗಳಿಗೆ ಯಾರು ರಕ್ಷಣೆಯಾಗಿ ನಿಂತಿದ್ದಾರೆ ಎನ್ನುವುದನ್ನು ಸುಪ್ರೀಂ ಕೋರ್ಟ್‌ನ ಈ ತೀರ್ಪು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.

ʼಬಿಲ್ಕಿಸ್‌ ಬಾನೋ ಅವರ ಈ ದಣಿವರಿಯದ ಪ್ರಯತ್ನವು ದುರಹಂಕಾರಿ ಬಿಜೆಪಿ ಸರ್ಕಾರದ ವಿರುದ್ಧದ ನ್ಯಾಯದ ಗೆಲುವಾಗಿದೆʼ ಎಂದು ಕೂಡ ಅವರು ಬರೆದುಕೊಂಡಿದ್ದಾರೆ.

ʼ ನ್ಯಾಯಮೂರ್ತಿಗಳಾದ ಬಿ. ವಿ ನಾಗರತ್ನ ಹಾಗೂ ಉಜ್ಜಲ್‌ ಭುಯಾನ್‌ ಅವರಿದ್ದ ದ್ವೀಸದಸ್ಯ ನ್ಯಾಯಪೀಠ, ಮಹಿಳೆಯೊಬ್ಬರು ಯಾವುದೇ ಮತ್ಕ್ಕೆ ಸೇರಿರಬಹುದು ಅಥವಾ ಯಾವುದೇ ನಂಬಿಕೆಯನ್ನು ಅನುಸರಿಸುತ್ತಿರಬಹುದು. ಅವರ ಮೇಲೆ ನಡೆದ ಘೋರ ಅಪರಾದ ನಡೆಸಿದವರಿಗೆ ಕ್ಷಮಾಪಣೆ ನೀಡುವುದಕ್ಕೆ ಸಾದ್ಯವೇ ? ಎಂದು ಗುಜರಾತ್‌ ಸರ್ಕಾರವನ್ನು ಪ್ರಶ್ನಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!