Sunday, September 8, 2024

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಲಿಂಗಾಯತ ಸ್ವಾಮಿಗಳ ಮನವಿ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ, ಮಹಿಳಾ ಚಳವಳಿಗಳ ಮುಖಂಡರುಗಳ ನಿಯೋಗದ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ, ಮಾತನಾಡಿದರು.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೊರಲ ಒತ್ತಾಯವನ್ನು  ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆಗಿಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಆದ್ದರಿಂದ ಈ ಮಹತ್ವದ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನಿಸಲಾಗುವುದು ಎಂದು ಅವರು ಭರವಸೆ ನೀಡಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!