spot_img
Friday, April 17, 2026
spot_img

ʼಬಿಜೆಪಿಗೆ ಸನ್ಮತಿ ದೇ ಭಗವಾನ್” ಎಂದು ಹೇಳಬೇಕಾಗಿ ಬಂದಿರುವುದು ದುರಂತ : ಕಾಂಗ್ರೆಸ್‌

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎಂದು ಕಾಂಗ್ರೆಸ್‌ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಪರೋಕ್ಷವಾಗಿ ಬಿಜೆಪಿ ವಿರುದ್ಧ ಹರಿಹಾಯ್ದಿದೆ.

ತನ್ನ ಅಧಿಕೃತ ಮೈಕ್ರೋಬ್ಲಾಗಿಂಗ್‌ ಖಾತೆ ʼಎಕ್ಸ್‌ʼ ನಲ್ಲಿ ರಾಮ ಮಂದಿರಗಳಿಗೆ ತಾನು ನೀಡಿದ ಕೊಡುಗೆಗಳನ್ನು ಹೇಳಿಕೊಂಡು ತನ್ನನ್ನು ತಾನೇ ಪ್ರಶಂಸಿಕೊಂಡ ಕಾಂಗ್ರೆಸ್‌, ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು. ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು  ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ ಎಂದು ಹೇಳಿದೆ.

ಇನ್ನು, ರಾಜೀವ್‌ ಗಾಂಧಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ರಾಮ ಮಂದಿರದ ವಿಚಾರಕ್ಕೆ ಸಂಬಂಧಿಸಿ ಮಾಡಿದ ಕೆಲಸಗಳನ್ನು ವಿವರಿಸಿದ ಕಾಂಗ್ರೆಸ್‌, 1985-86 ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ. 1989 ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್ ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ ಎಂದು ತಿವಿದಿದೆ.

ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ ರಾಮನ ಹೆಸರು ಹೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ “ರಾಜ್ಯ ಬಿಜೆಪಿಗೆ ಸನ್ಮತಿ ದೇ ಭಗವಾನ್” ಎಂದು ಹೇಳಬೇಕಾಗಿ ಬಂದಿರುವುದು ದುರಂತ ಎಂದು ಹೇಳಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!