spot_img
Friday, April 17, 2026
spot_img

ತಮಿಳುನಾಡಿನ ಉಪ ಮುಖ್ಯಮಂತ್ರಿಯಗಿ ಸ್ಟ್ಯಾಲಿನ್‌ ಪುತ್ರ ಉದಯನಿಧಿ ನೇಮಕ ಸಾಧ್ಯತೆ !?

ಜನಪ್ರತಿನಿಧಿ ವಾರ್ತೆ ( ಚೆನ್ನೈ) : ಮುಂದಿನ ಕೆಲವು ದಿನಗಳಲ್ಲೇ ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಹಾಗೂ ಕ್ರೀಡಾ ಸಚಿವ ಉದಯನಿಧಿ ಅವರನ್ನು ಪದನ್ನೋತಿಗೊಳಿಸುವ ಸಾಧ್ಯತೆ ಇದೆ ಎಂದು ತಮಿಳುನಾಡಿನ ರಾಜಕೀಯ ವಲಯದಲ್ಲಿ ಊಹಾಪೋಹಗಳು ಹರಿದಾಡುತ್ತಿವೆ.

ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮೂಲಗಳು ಎಂಕೆ ಸ್ಟಾಲಿನ್ ಫೆಬ್ರವರಿಯಲ್ಲಿ ವಿದೇಶ ಪ್ರವಾಸವನ್ನು ಕೈಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿವೆ. ಆ ಕಾರಣಕ್ಕಾಗಿ ಉದಯನಿಧಿ ಸ್ಟಾಲಿನ್ ತಂದೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ, ಮಾತ್ರವಲ್ಲದೇ ತಮಿಳುನಾಡಿಗೆ ನೂತನ ಉಪ ಮುಖ್ಯಮಂತ್ರಿಯಾಗಿ ಪದನ್ನೋತಿ ಹೊಂದುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಇಂಡಿಯತಾ ಟುಡೇ ವರದಿ ಮಾಡಿದೆ.

ಜನವರಿ 21 ರಂದು ಸೇಲಂನಲ್ಲಿ ಪಕ್ಷದ ಯುವ ಘಟಕದ ಸಭೆಯನ್ನು ನಿಗದಿಪಡಿಸಿದೆ. ಈ ಬಳಿಕೆ ಈ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಲಾಗಿದೆ.

ಬಗ್ಗೆ ಪ್ರತಿಕ್ರಿಯಿಸಿದ ಡಿಎಂಕೆ ಪಕ್ಷ ಸಂಘಟನೆಯ ಕಾರ್ಯದರ್ಶಿ ಟಿಕೆಎಸ್ ಇಳಂಗೋವನ್, ತಮಿಳುನಾಡಿನ ಉಪಮುಖ್ಯಮಂತ್ರಿಯಾಗಿ ಉದಯನಿಧಿ ಅವರನ್ನು ನೇಮಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಆದರೇ, ಅವರು ಪಕ್ಷದಲ್ಲಿ ಉದಯನಿಧಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಮಾತ್ರವಲ್ಲದೇ, ಉದಯನಿಧಿ ಅವರನ್ನು ಉಪ ಮುಖ್ಯಮಂತ್ರಿಯಾಗಿ ನೇಮಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಪಕ್ಷದಲ್ಲಿ ಉದಯನಿಧಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅಂತಿಮವಾಗಿ ಎಂಕೆ ಸ್ಟ್ಯಾಲಿನ್‌ ಅವರದ್ದಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನು, ಈ ಬಗ್ಗೆ ಸ್ಪಂದಿಸಿದ ಉದಯನಿಧಿ ಸ್ಟ್ಯಾಲಿನ್‌, ಇದು ʼವದಂತಿʼ ಅಷ್ಟೆ. ಪಕ್ಷ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಎಲ್ಲವನ್ನೂ ಮುಖ್ಯಮಂತ್ರಿಗಳನ್ನು ಅಂತಿಮ ಮಾಡಬೇಕಿದೆ. ಇದು ಕೇವಲ ʼವದಂತಿʼ ಎಂದು ಅವರು ಹೇಳಿದ್ದಾರೆ.

ವರದಿಗಳಿಗೆ ಪ್ರತಿಕ್ರಿಯಿಸಿದ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಉದಯನಿಧಿ ಉಪಮುಖ್ಯಮಂತ್ರಿಯಾಗುವುದನ್ನು ವದಂತಿ ಎಂದು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ.

ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ಎಐಎಡಿಎಂಕೆ ವಕ್ತಾರ ಕೋವೈ ಸತ್ಯನ್, “ಅವರಿಗೆ (ಉದಯನಿಧಿ) ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದಾಗಿನಿಂದ. ಕಳೆದ ಒಂದು ವರ್ಷದಿಂದ ನಾವು ಹೇಳುತ್ತಿರುವುದು ಇದನ್ನೇ ಆಗಿದೆ. ಅವರು ನಂತರ ಸಚಿವರಾದರು ಮತ್ತು ಈಗ ಉಪಮುಖ್ಯಮಂತ್ರಿಯಾಗುತ್ತಿದ್ದಾರೆ. ಅವರು 2026 ರಲ್ಲಿ ಮುಖ್ಯಮಂತ್ರಿಯಾಗುತ್ತಾರೆ. ಮತ್ತು ಪ್ರಜಾಪ್ರಭುತ್ವದ ಹೆಸರಿನಲ್ಲಿ ಡಿಎಂಕೆ ‘ಪರಿವಾರ ವಾದ’ಕ್ಕೆ ಪರಿಪೂರ್ಣ ಉತ್ತಮ ಉದಾಹರಣೆಯಾಗುತ್ತದೆ ಎಂದು ಇದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇನ್ನು, ಉದಯನಿಧಿ ಸ್ಟಾಲಿನ್ ಕಳೆದ ವರ್ಷ ಕಾರ್ಯಕ್ರಮವೊಂದರಲ್ಲಿ ಸನಾತನ ಧರ್ಮವನ್ನು ಕೊರೊನಾ, ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದರು. ಹೇಗೆ ಈ ರೋಗಗಳ ವಿರುದ್ಧ ಹೋರಾಡಿದರೆ ಪ್ರಯೋಜನವಿಲ್ಲವೋ, ಅದನ್ನು ಬುಡ ಸಮೇತ ನಿರ್ಮೂಲನೆ ಮಾಡುವ ಅಗತ್ಯವಿದೆಯೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿದರೆ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ ಮಾಡುವ ಅಗತ್ಯವಿದೆ ಎಂದು ಉದಯನಿಧಿ ಹೇಳಿದ್ದರು. ಉದಯನಿಧಿ ಅವರ ಈ ವಿವಾದಾತ್ಮಕ ಹೇಳಿಕೆ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿತ್ತು. ಆದಾಗ್ಯೂ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!