spot_img
Wednesday, January 22, 2025
spot_img

ಟೀಂ ಇಂಡಿಯಾದ ಶರವೇಗದ ಬೌಲರ್‌ ಮೊಹಮ್ಮದ್‌ ಶಮಿಗೆ ಒಲಿದ ಅರ್ಜುನ ಪ್ರಶಸ್ತಿ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಭಾರತದ ಶರವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಇಂದು(9 ಜನವರಿ 2024, ಮಂಗಳವಾರ) ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರಿಂದ ಅರ್ಜುನ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. 2023 ರ ಏಕದಿನ ವಿಶ್ವಕಪ್‌ ಪಂದ್ಯಗಳಲ್ಲಿ ಅದ್ಭುತ ಪ್ರಶಸ್ತಿ ನೀಡಿದ್ದನ್ನು ಗುರುತಿಸಿ  ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು ಶಮಿ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿತ್ತು. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶಮಿ 2023 ರ ವಿಶ್ವಕಪ್  ಪಂದ್ಯಾವಳಿಯಲ್ಲಿ ಅತ್ಯುತ್ತಮ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು, ಕೇವಲ 7 ಪಂದ್ಯಗಳಿಂದ 24 ವಿಕೆಟ್ ಗಳನ್ನು ಪಡೆದು ವಿಶ್ವಕಪ್‌ ಟೂರ್ನಿಯೊಂದರಲ್ಲಿ ಯಾರೂ ಮಾಡದ ದಾಖಲೆ ಬರೆದಿದ್ದರು.

ಪ್ರಶಸ್ತಿ ಸ್ವೀಕರಿಸುವುದಕ್ಕೂ ಮುನ್ನ ಪ್ರತಿಕ್ರಿಯಿಸಿದ ಶಮಿ, “ಈ ಪ್ರಶಸ್ತಿ ಒಂದು ಕನಸು, ಜೀವನವು ಸಾಗುತ್ತಲಿರುತ್ತದೆ. ಎಲ್ಲರೂ ಇಂತಹ ಪ್ರಶಸ್ತಿಯನ್ನು ಪಡೆಯುವುದಕ್ಕೆ ಸಾದ್ಯವಿಲ್ಲ.  ಈ ಪ್ರಶಸ್ತಿಗೆ ನಾನು ನಾಮನಿರ್ದೇಶನಗೊಂಡಿರುವುದು ನನಗೆ ಖುಷಿ ತಂದಿದೆ” ಎಂದು ಹೇಳಿದ್ದರು.

ಮೊಹಮ್ಮದ್ ಶಮಿ ವಿಶ್ವಕಪ್ 2023 ರ ಮೊದಲ ನಾಲ್ಕು ಪಂದ್ಯಗಳಿಗೆ ಆಡುವ ಹನ್ನೊಂದು ಮಂದಿ ಆಟಗಾರರರ ಪಟ್ಟಿಯಲ್ಲಿ ಸ್ಥಾನ ಪಡೆದಿರಲಿಲ್ಲ.  ಆದರೇ, ಅಕ್ಟೋಬರ್ 19 ರಂದು ಬಾಂಗ್ಲಾದೇಶದ ವಿರುದ್ಧ ಹಾರ್ದಿಕ್ ಪಾಂಡ್ಯ ಪಾದದ ಗಾಯಕ್ಕೆ ಒಳಗಾಗಿ ಟೂರ್ನಿಯಿಂದ ಹೊರಗುಳಿದ ಕಾರಣದಿಂದ ಶಮಿ ಅವರನ್ನು ಸೇರಸಿಕೊಳ್ಳಲಾಗಿತ್ತುಶಮಿ ವಿಶ್ವಕಪ್‌ ಟೂರ್ನಿಯ ಉದ್ದಕ್ಕೂ ಪಂದ್ಯಾವಳಿಯಲ್ಲಿ ತ್ವರಿತ ಪ್ರಭಾವ ಬೀರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!