Sunday, September 8, 2024

ರಾಮ ಮಂದಿರ ಉದ್ಘಾಟನೆ : ಭಕ್ತಿ ತೋರಿಸಿ, ವಿವಾದ ಸೃಷ್ಟಿಯಾಗದಂತೆ ನೋಡಿಕೊಳ್ಳಿ : ಬಿಜೆಪಿ ನಾಯಕರಿಗೆ ಮೋದಿ ಸೂಚನೆ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಜನವರಿ 22, 2024 ರಂದು ಅಯೋಧ್ಯೆಯಲ್ಲಿ ಭಗವಾನ್ ರಾಮನ ಪ್ರತಿಮೆ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕ್ಯಾಬಿನೆಟ್ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂತ್ರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ ಎಂದು ವರದಿಯಾಗಿದೆ.  

ನೀವು ನಿಮ್ಮ ನಂಬಿಕೆ ಮತ್ತು ಭಕ್ತಿಯನ್ನು ತೋರಿಸಿ ಆದರೇ, ಭಕ್ತಿಯಿಂದ ಮಾತನಾಡುವ ಭರದಲ್ಲಿ ವಿವಾದ ಸೃಷ್ಟಿಯಾಗದೆ ಇರುವ ಹಾಗೆ ನೋಡಿಕೊಳ್ಳಿ ಎಂದು ಕೇಂದ್ರದ ಕ್ಯಾಬಿನೆಟ್‌ ಸದಸ್ಯರಿಗೆ ಸೂಚಿಸಿದ್ದಾರೆ ಎಂದು ಮೋದಿ  ಆಪ್ತ ವಲಯ ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆ ಇಂಡಿಯಾ ಟುಡೇ ವರದಿ ಮಾಡಿದೆ.

ಅನಾವಶ್ಯಕ ಹೇಳಿಕೆಗಳನ್ನು ನೀಡದಂತೆ ಮತ್ತು ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಪೂರೈಸುವಲ್ಲಿ ಸಹಕರಿಸುವಂತೆ ಸೂಚಿಸಿದ್ದಲ್ಲದೇ, ತಮ್ಮ ಕ್ಷೇತ್ರಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಮತ್ತು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ನಿರ್ದೇಶಿಸಿದ್ದಾರೆ.  

ಇನ್ನು,ಜನವರಿ 22 ರಂದು ನಡೆಯುವ ಸಮಾರಂಭದ ನಂತರ ಅಯೋಧ್ಯೆಗೆ ತಮ್ಮ ಕ್ಷೇತ್ರಗಳ ಸ್ಥಳೀಯ ಜನರ ಭೇಟಿಗೆ ವ್ಯವಸ್ಥೆ ಮಾಡುವಂತೆ ಸಚಿವರುಗಳಿಗೆ ತಿಳಿಸಿದ್ದಾರೆ.

ರಾಮಲಲ್ಲಾ ಪ್ರತಿಷ್ಠಾ ಕಾರ್ಯಕ್ರಮವು ದೇಶಾದ್ಯಂತ ಪ್ರಸಾರವಾಗಲಿದೆ ಮತ್ತು ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಲ್ಲಿ ಈವೆಂಟ್‌ನ ಲೈವ್-ಸ್ಟ್ರೀಮಿಂಗ್ ಕೂಡ ಇರುತ್ತದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ 7,000 ಕ್ಕೂ ಹೆಚ್ಚು ಜನರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಹಲವಾರು ಪ್ರಸಿದ್ಧ ವ್ಯಕ್ತಿಗಳು ಮತ್ತು ಸೆಲೆಬ್ರಿಟಿಗಳನ್ನು ಸಹ ಆಹ್ವಾನಿಸಲಾಗಿದೆ. ಪ್ರಧಾನಿ ಮೋದಿ ಅವರು ಭಾರತ ಮತ್ತು ವಿದೇಶದಲ್ಲಿರುವ ಎಲ್ಲ ರಾಮಭಕ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!