Sunday, September 8, 2024

ಪ್ರಧಾನಿ ಮೋದಿ ಅವರು ಎಲ್ಲವನ್ನೂ ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಾರೆ : ಮಲ್ಲಿಕಾರ್ಜುನ್‌ ಖರ್ಗೆ

ಜನಪ್ರತಿನಿಧಿ ವಾರ್ತೆ (ಕಲಬುರುಗಿ) : ಅಂತರಾಷ್ಟ್ರೀಯ ಮಟ್ಟದಲ್ಲಿ ಮೊದಲು ನಾವು ನಮ್ಮ ನೆರೆಹೊರೆಯವರನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು. ಕೆಟ್ಟ ಪರಿಸ್ಥಿತಿ ಬಂದಾಗ ಹೋರಾಟಕ್ಕೂ ತಯಾರಬೇಕಾಗುತ್ತದೆ. ಪ್ರಧಾನಿ ಮೋದಿ ಅವರು ಎಲ್ಲವನ್ನೂ ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಾರೆ ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹೇಳಿದ್ದಾರೆ.

ಇಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ʼಇಂದಿರಾಗಾಂಧಿ ಪಾಕಿಸ್ತಾನವನ್ನು ಬೇರ್ಪಡಿಸಿ ಬಾಂಗ್ಲದೇಶವನ್ನು ಹೇಗೆ ನಿರ್ಮಾಣ ಮಾಡಿದ್ದರೋ ಅಂತಹದ್ದೊಂದು ಹೋರಾಟ ಮಾಡಬೇಕಾಗುತ್ತದೆ. ಅಂತರಾಷ್ಟ್ರೀಯ ನೀತಿ ವಿಚಾರದಲ್ಲಿ ಪ್ರಧಾನಿ ಅವರು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಟೀಕೆ ಮಾಡಿದ್ದಾರೆ.

ಯಾವಾಗ ಯಾರನ್ನು ಬೇಕಾದರೂ ತಬ್ಬಿಕೊಳ್ಳುತ್ತಾರೆ, ಯಾರನ್ನು ಬೇಕಾದರೂ ತೆಗೆದುಕೊಳ್ಳುತ್ತಾರೆ. ನಾವು ನಮ್ಮ ನೆರೆಹೊರೆಯ ದೇಶದವರನ್ನು ಬದಲಾಯಿಸಲಾಗುವುದಿಲ್ಲ. ಹಾಗಾಗಿ ಅವರೊಂದಿಗೆ ಚೆನ್ನಾಗಿರಬೇಕು. ನಾವು ಒಂದಾಗಿ ಹೋಗಬೇಕಿದೆ. ಅವರನ್ನು ನಮ್ಮ ಮೈಮೇಲೆ ಬಂದಾಗ ದೇಶಕ್ಕಾಗಿ ಹೋರಾಟಕ್ಕೂ ಸಿದ್ಧರಾಗಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಮೂರು ಉಪ ಮುಖ್ಯಮಂತ್ರಿ ಪ್ರಸ್ತಾವ ಇಲ್ಲ :

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮೂರು ಉಪ ಮುಖ್ಯಮಂತ್ರಗಳ ವಿಚಾರ ಮುನ್ನೆಲೆಗೆ ಬಂದಿದ್ದು, ಈ ವಿಚಾರಕ್ಕೆ ಸಂಬಂಧಿಸಿದ ಪ್ರತಿಕ್ರಿಯಿಸಿದ ಖರ್ಗೆ, ಈ ವಿಚಾರವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರನ್ನೇ ಕೇಳಿ. ನಮ್ಮ ಮುಂದೆ ಈವರೆಗೆ ಇಂತಹ ಯಾವುದೇ ಪ್ರಸ್ತಾಪ ಬಂದಿಲ್ಲ. ಇವೆಲ್ಲಾ ರಾಜಕೀಯದದ ಊಹಾಪೋಹ. ಚುನಾವಣೆ ಸಂದರ್ಭದಲ್ಲಿ ಇಂತಹ ವಿಚಾರ ಬರಬಾರದು. ಸದ್ಯಕ್ಕೆ ಸರ್ಕಾರ ನಡೆಸುವ ಕಡೆಗೆ, ಸಮಸ್ಯೆಗಳ ಕಡೆಗೆ ಗಮನ ನೀಡಬೇಕಿದೆ.  ಕಾಂಗ್ರೆಸ್‌ ನೀಡಿರುವ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವುದರ ಬಗ್ಗೆ ಗಮನ ನೀಡಬೇಕಿದೆ ಎಂದು ಅವರು ಹೇಳಿದ್ದಾರೆ.

ʼಇಂಡಿಯಾʼ ಮೈತ್ರಿಕೂಟ ಒಗ್ಗಟ್ಟಾಗಿದೆ :

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯಾವ ಕ್ಷೇತ್ರಕ್ಕೆ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು ಎನ್ನುವ ವಿಚಾರಕ್ಕೆ ನಾಳೆ ದೆಹಲಿಯಲ್ಲಿ ಸಭೆ ಕರೆಯಲಾಗಿದೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಲೋಕಸಭಾ ಚುನಾವಣೆ ಗೆಲ್ಲುವ ಉದ್ದೇಶದಿಂದ ʼಇಂಡಿಯಾʼ ಮೈತ್ರಿಕೂಟ ಒಗ್ಗಟ್ಟಾಗಿದೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!