Sunday, September 8, 2024

ರಾಜ್ಯದಲ್ಲಿ ಬರ ಬಂದು 7 ತಿಂಗಳು ಕಳೆದರೂ ಈವರೆಗೂ ರೈತರಿಗೆ ಒಂದು ರೂಪಾಯಿ ಪರಿಹಾರ ತಲುಪಿಲ್ಲ : ಅಶೋಕ್‌ ಆಕ್ರೋಶ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ಬರ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯದ ಬಗ್ಗೆ ದೂರು ನೀಡಲು ಇಂದು ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲರಾದ ತಾವರ್‌ ಚಾಂದ್‌ ಗೆಲ್ಹೋಟ್‌ ಅವರನ್ನು ಭೇಟಿ ಮಾಡಿತು.

ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಸ್ಪಂದಿಸಿದ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌, ರಾಜ್ಯದಾದ್ಯಂತ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡದ್ದರೂ ಈವರೆಗೂ ಒಬ್ಬ ಸಚಿವ ಅಥವಾ ಅಧಿಕಾರಿಯೂ ರೈತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಸೌಜನ್ಯ ತೋರಿಲ್ಲ. ರಾಜ್ಯದಲ್ಲಿ ಬರ ಬಂದು 7 ತಿಂಗಳು ಕಳೆದರೂ ಈವರೆಗೂ ರೈತರಿಗೆ ಒಂದು ರೂಪಾಯಿ ಪರಿಹಾರ ತಲುಪಿಲ್ಲ ಎಂದು ಅವರು ಆಕ್ರೋಶ ಹೊರ ಹಾಕಿದರು.

ಇವೆಲ್ಲದರ ಮಧ್ಯೆ ನೊಂದ ರೈತರ ಪರವಾಗಿ ಪ್ರತಿಪಕ್ಷಗಳು ಧ್ವನಿ ಎತ್ತಿದರೆ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ತೋರಿಸುವ ಮಾಡುವ ಮೂಲಕ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತದೆ ಈ ಬೇಜವಾಬ್ದಾರಿ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರದ ಈ ರೈತ ವಿರೋಧಿ ಧೋರಣೆ, ನಿರ್ಲಕ್ಷ್ಯದ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿ ಮನವರಿಕೆ ಮಾಡಿದ್ದೇವೆ. ರೈತರಿಗೆ ಪರಿಹಾರ ನೀಡದೇ ಹೋದಲ್ಲಿ ಪ್ರತಿಭಟನೆ ತೀಔರಗೊಳಿಸಬೇಕಾಗುತ್ತದೆ ಎಂದು ಅವರು ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಮಾಜಿ ಕೇಂದ್ರ ಸಚಿವ ಡಿ. ವಿ ಸದಾನಂದ ಗೌಡ ಸೇರಿ ಪಕ್ಷದ ಪ್ರಮುಖರು ಇದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!