spot_img
Thursday, April 16, 2026
spot_img

ಜ.14ರಂದು ಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ, ‘ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್’ ಉದ್ಘಾಟನೆ

ಕುಂದಾಪುರ:ಜ. 9: (ಜನಪ್ರತಿನಿಧಿ ವಾರ್ತೆ) ‘ಒಂದೇ ಜಾತಿ, ಒಂದೇ ಮತ ಮತ್ತು ಒಂದೇ ದೇವರು’ ಎನ್ನುವ ಆದರ್ಶದ ತುರ್ತು ಅಗತ್ಯವನ್ನು ಮನಗಂಡು ಕೋಡಿಯ ಬ್ಯಾರೀಸ್ ಶಿಕ್ಷಣ ಸಂಸ್ಥೆ ಈ ವರ್ಷ ವಿಶ್ವಶಾಂತಿ ಸಂದೇಶ ಸಾರುವ ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ ಸಂಸ್ಥಾಪಕರ ದಿನಾಚರಣೆ, ವಾರ್ಷಿಕೋತ್ಸವವನ್ನು ಜ.14 ಭಾನುವಾರ ಬೆಳಿಗ್ಗೆ 10ಗಂಟೆಗೆ ಆಯೋಜಿಸಿದೆ. ಈ ಸುಸಂದರ್ಭದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್’ ಉದ್ಘಾಟನೆಗೊಳ್ಳಲಿದೆ ಹಾಗೂ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಲಾಂಛನ ಅನಾವರಣಗೊಳಿಸಲಾಗುವುದು ಎಂದು ಅಧ್ಯಕ್ಷರಾದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ಹೇಳಿದರು.

ಅವರು ಕುಂದಾಪುರ ಪ್ರೆಸ್ ಕ್ಲಬ್ ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನಸಭೆ ಅಧ್ಯಕ್ಷರಾದ ಯು.ಟಿ ಖಾದರ್, ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ಮತ್ತು ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ ಪಾಟೀಲ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಸರಾಂತ ಪರಿಸರವಾದಿಗಳಾದ ಪದ್ಮಶ್ರೀ ತುಳಸಿ ಗೌಡ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮುಸ್ಲಿಂ ಎಜ್ಯುಕೇಶನಲ್ ಇನ್ಸಿಟಿಟ್ಯೂಟ್ ಫೆಡರೇಶನ್ ಅಧ್ಯಕ್ಷರಾದ ಮೂಸಬ್ಬ ಪಿ. ಬ್ಯಾರಿ ಇವರನ್ನು ಸನ್ಮಾನಿಸಲಾಗುವುದು ಎಂದರು.

ಬ್ಯಾರೀಸ್ ಮಹಾವಿದ್ಯಾಲಯದಲ್ಲಿ ಬಾಲವಾಡಿ, ಎಲ್.ಕೆಜಿ., ಯುಕೆಜಿಯಿಂದ ಪದವಿಯ ತನಕ ಶಿಕ್ಷಣ ನೀಡಲಾಗುತ್ತಿದೆ. ಡಿ‌ಎಡ್, ಬಿ‌ಎಡ್ ಕೋರ್ಸುಗಳು ಇವೆ. ಉತ್ತಮ ಹಾಸ್ಟೆಲ್ ವ್ಯವಸ್ಥೆ ಹೊಂದಿದೆ. ಮುಂದಿನ ದಿನಗಳಲ್ಲಿ ನರ್ಸಿಂಗ್, ಪ್ಯಾರಾ ಮೆಡಿಕಲ್ ಕಾಲೇಜು ಆರಂಭವಾಗಲಿದೆ ಎಂದರು.

ಪ್ರೊ.ಹಯವದನ ಉಪಾಧ್ಯ ಮಾತನಾಡಿ, 1906ರಲ್ಲಿ ಶಿಕ್ಷಣದ ಮೊಳಕೆ ಎಂಬಂತೆ ಕೋಡಿಯಲ್ಲಿ ಸಣ್ಣ ಶಾಲೆಯೊಂದು ಹುಲ್ಲಿನ ಹೊದಿಕೆಯಿಂದ ಕೂಡಿದ ಚಪ್ಪರದಡಿಯಲ್ಲಿ ಅಕ್ಷರ ಪ್ರಪಂಚವನ್ನು ಪರಿಚಯಿಸಿತು. ಕೀರ್ತಿಶೇಷರಾದ ದಿವಂಗತ ಹಾಜಿ ಮಾಸ್ಟರ್ ಮಹಮೂದ್ ಅವರ ಅಧ್ಯಕ್ಷತೆಯಲ್ಲಿ ವಿವಿಧ ಅಂಗಸಂಸ್ಥೆಗಳು ಊರ ಪರವೂರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದಾರಿಯಾಯಿತು. ಪ್ರಸ್ತುತ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ಅವರ ನೇತೃತ್ವದಲ್ಲಿ, ಸಂಚಾಲಕರಾದ ಸಯ್ಯದ್ ಮೊಹಮ್ಮದ್ ಬ್ಯಾರಿ ಅವರ ಮಾರ್ಗದರ್ಶನದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಅತ್ಯುತ್ತಮ ಶೈಕ್ಷಣಿಕ ಸಾಧನೆಗಳ ಜೊತೆಗೆ ಪರಿಸರ ಮುಖಿ ಚಿಂತನೆಯೊಂದಿಗೆ ಪ್ರತಿ ತಿಂಗಳು ನಡೆಸುತ್ತಿರುವ ‘ಸ್ವಚ್ಛ ಕಡಲತೀರ-ಹಸಿರು ಕೋಡಿ’ ಅಭಿಯಾನವು 28 ಹಂತವನ್ನು ಯಶಸ್ವಿಯಾಗಿ ಪೂರೈಸಿದೆ ಎಂದರು.

ಬ್ಯಾರಿಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿದ್ದಪ್ಪ ಕೆ. ಎಸ್, ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಮೀರ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!