spot_img
Wednesday, January 22, 2025
spot_img

ಶಂಕರನಾರಾಯಣ: ಮದರ್ ತೆರಸಾ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿ ಹಬ್ಬದ ಸಂಭ್ರಮ

ಶಂಕರನಾರಾಯಣ: (ಜನಪ್ರತಿನಿಧಿ ವಾರ್ತೆ) ಶಂಕರನಾರಾಯಣದ ಮದರ್ ತೆರೆಸಾ ಶಿಕ್ಷಣ ಸಂಸ್ಥೆ ಇಲ್ಲಿ 25 ವರ್ಷಗಳ ಸಂವತ್ಸರಗಳನ್ನು ಪೂರೈಸಿದ ಸಂದರ್ಭದಲ್ಲಿ ರೌಪ್ಯೋತ್ಸವದ ಉದ್ಘಾಟನಾ ಕಾರ್ಯಕ್ರಮ ಜ.7ರಂದು ಸಂಜೆ ಅದ್ದೂರಿಯಾಗಿ ನೆರವೇರಿತು.

ಬೆಳ್ಳಿಹಬ್ಬದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ನಿವೃತ್ತ ಲೋಕಾಯುಕ್ತರಾದ ಎನ್.ಸಂತೋಷ ಹೆಗ್ಡೆ ವಹಿಸಿದ್ದರು. ಅಧ್ಯಕ್ಷಿಯ ಮಾತುಗಳನ್ನಾಡಿದ ಅವರು ನಮ್ಮ ಸಮಾಜದಲ್ಲಿ ತುಂಬಿಕೊಂಡಿರುವ ಭ್ರಷ್ಟಾಚಾರ, ಅನ್ಯಾಯ, ಅಧರ್ಮ, ಮೋಸ, ವಂಚನೆಗಳ ಬಗ್ಗೆ ಖೇದವನ್ನು ವ್ಯಕ್ತಪಡಿಸುತ್ತಾ ಪೋಷಕರು ತಮ್ಮ ಮಕ್ಕಳಿಗೆ ಕೇವಲ ಶಿಕ್ಷಣವನ್ನು ನೀಡಿದರೆ ಸಾಲದು ಮಕ್ಕಳಲ್ಲಿ ಒಳ್ಳೆಯ ಗುಣಗಳನ್ನು ಬಿತ್ತಿ ಮಾನವರಂತೆ ಬದುಕುವ ಕಲೆಯನ್ನು ಕಲಿಸಬೇಕು ಎಂದು ಹೇಳಿದರು.

ಕಾರ್ಯಕ್ರಮವನ್ನು ಮೈಸೂರು ಮರ್ಕಂಟೈಲ್ ಬೆಂಗಳೂರು ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಎಚ್.ಎಸ್. ಶೆಟ್ಟಿ ಉದ್ಘಾಟಿಸಿ, ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 25 ವರ್ಷಗಳ ಪ್ರಗತಿಯನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಾಚಾರ್ಯದ್ವಯರು ಏಳುಬೀಳುಗಳ ಬಗ್ಗೆ ಮಾತನಾಡುತ್ತಾ ಇಪ್ಪತ್ತೈದು ವರ್ಷಗಳ ಪ್ರಯಾಣದಲ್ಲಿ ತಮ್ಮೊಂದಿಗೆ ಕೈಜೋಡಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ರೌಪ್ಯೋತ್ಸವ ಸಮಾರಂಭದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ವೈಶಾಲಿ ಶೆಟ್ಟಿ ಸ್ವಾಗತಿಸಿದರು. ಗೀತಾ ವಂದಿಸಿದರು. ಇಂಗ್ಲೀಷ್ ಉಪನ್ಯಾಸಕರಾದ ರಾಮ್ ಭಟ್ ಸಜಂಗದ್ದೆ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ತರುವಾಯ ವಿದ್ಯಾರ್ಥಿಗಳಿಂದ ವಿವಿಧ ವೈವಿಧ್ಯಮಯ ಮನೋರಂಜನ ಕಾರ್ಯಕ್ರಮಗಳು ನಡೆದವು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!