spot_img
Thursday, April 16, 2026
spot_img

‘ಹೊಳಪು-2024’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ ಅವರ ಆಶ್ರಯದಲ್ಲಿ ನಡೆಯುವ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ-ಸಾಂಸ್ಕೃತಿಕ ಸ್ಪರ್ಧೆ ಹೊಳಪು-2024 (ಗ್ರಾಮ ಸರಕಾರದ ದಿಬ್ಬಣ) ಕಾರ್ಯಕ್ರಮದ ಪೋಸ್ಟರ್ ಅನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಅನಾವರಣಗೊಳಿಸಿದರು.

ಜನಪ್ರತಿನಿಧಿಗಳು ಎಲ್ಲ ಒತ್ತಡಗಳನ್ನು ಮರೆತು, ಪಕ್ಷ ಭೇಧದ ಹಂಗಿಲ್ಲದೇ ನಾವೆಲ್ಲರೂ ಒಂದೇ ಎಂದು ಸೇರುವ ಕಾರ್ಯಕ್ರಮ ಹೊಳಪು. ಫೆಬ್ರವರಿ 10 ರಂದು ಕೋಟದ ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು ಎಲ್ಲ ಗ್ರಾಮ ಪಂಚಾಯತ್ ಪ್ರತಿನಿಧಿಗಳು, ನಗರ ಸ್ಥಳೀಯಾಡಳಿತ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಭ್ರಮದಿಂದ ಭಾಗವಹಿಸಿ ಕಾರ್ಯಕ್ರಮ ಯಶಸ್ಸುಗೊಳಿಸಬೇಕೆಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಡಾ|| ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್, ಪಿ.ಡಿ.ಓ ರವೀಂದ್ರ ರಾವ್ ಹಾಗೂ ಪಂಚಾಯತ್ ಸದಸ್ಯರು ಪ್ರತಿಷ್ಠಾನದ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!