spot_img
Saturday, April 18, 2026
spot_img

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ, ಸಮಿತಿ ರಚನೆಯ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಕಾಂಗ್ರೆಸ್‌ ಚುನಾವಣೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳ  ಗ್ಯಾರಂಟಿಗಳ ಆಶ್ವಾಸನೆ ಈಡೇರಿಸುವುದಕ್ಕೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಹೆಚ್ಚು ಒತ್ತು ನೀಡುತ್ತಿದ್ದು,  ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಬುಧವಾರ) ಘೋಷಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಮಿತಿ ರಚನೆ ಬಗ್ಗೆ ಘೋಷಣೆ ಮಾಡಿದ್ದಾರೆ. 

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸಲಾಗುತ್ತಿದೆ. ಈ ಸಮತಿಯ ರಾಜ್ಯಾಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ಮತ್ತು ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುವುದು ಎಂದು ಕೂಡ ಅವರು ಹೇಳಿದ್ದಾರೆ.

ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲೂ ಸಮಿತಿ ರಚಿಸಲಾಗುವುದು. ರಾಜ್ಯ ಮಟ್ಟದ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡಲಾಗುವುದು. ಉಳಿದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವ ಧನ ನೀಡಲಾಗುವುದು. ಇದಕ್ಕೆ ವಾರ್ಷ 16 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!