spot_img
Thursday, April 16, 2026
spot_img

ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ : ಸಿಎಂ ಆಕ್ರೋಶ

ಜನಪ್ರತಿನಿಧಿ ವಾರ್ತೆ (ಬೆಂಗಳೂರು)  : 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದು ದೇಶದಲ್ಲೇ ಮೊದಲು. ಪ್ರತಿಯೊಬ್ಬ ಕಾರ್ಯಕರ್ತನೂ ಎದೆ ಎತ್ತಿ, ತಲೆ ಎತ್ತಿ ಹೇಳಿ. ಪಕ್ಷದ ಕಾರ್ಯಕರ್ತರೇ ನಮ್ಮ ಬೆನ್ನೆಲುಬು. ನಿಮ್ಮ ಹೋರಾಟದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ವಿರೋಧ ಪಕ್ಷ ಬಿಜೆಪಿಯ ವಿರುದ್ಧ ಹರಿಹಾಯ್ದ ಸಿಎಂ, ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿತ್ತು. ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9,000 ಕೋಟಿ,  ಸಣ್ಣನೀರಾವರಿ ಇಲಾಖೆಯಲ್ಲಿ  2,000 ಕೋಟಿ ರೂಪಾಯಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6,000 ಕೋಟಿ ರೂಪಾಯಿ, ಬೆಂಗಳೂರು ನಗರ 5,000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ. ಹೀಗೆ ರಾಜ್ಯವನ್ನು ಹಾಳುಮಾಡಿ, ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿ ಹೋಗಿದ್ದಾರೆ. ಇಷ್ಟಾದರೂ ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದ್ದಾರೆ.

ಬಿಜೆಪಿಯವರು ಚೆನ್ನಾಗಿ ತಿಂದು, ಸಾವಿರಾರು ಕೋಟಿ ಕೆಲಸ ಶುರು ಮಾಡಿಸಿ ಸುಮಾರು 40 ಸಾವಿರ ಕೋಟಿಗೂ ಹೆಚ್ಚು ಬಿಲ್ ಕೊಡದೆ, ಬಿಲ್ ಬಾಕಿ ಉಳಿಸಿ ಮನೆಗೆ ಹೋಗಿದ್ದಾರೆ. ದುರಾಡಳಿತ ನಡೆಸಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ ಎಂದು ಅವರು ಕಿಡಿ ಕಾರಿದ್ದಾರೆ.

ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕೈಮುಗಿದು ಮನವಿ ಮಾಡುತ್ತೇನೆ. ದಯವಿಟ್ಟು ನಿಮ್ಮ ಹೃದಯದ ಮಾತು ಕೇಳಿ ಎಂದು ಅವರು ಕಾರ್ಯಕರ್ತರನ್ನು ವಿನಂತಿಸಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!