spot_img
Thursday, April 16, 2026
spot_img

ಭಾರತ್‌ ಜೋಡೋ ನ್ಯಾಯ್‌ ಯಾತ್ರೆ ರೂಟ್‌ ಮ್ಯಾಪ್‌ ಹಂಚಿಕೊಂಡ ಕಾಂಗ್ರೆಸ್‌ ! ಆರ್ಥಿಕ, ಸಾಮಾಜಿಕ, ರಾಜಕೀಯ ನ್ಯಾಯದ ಹೋರಾಟಕ್ಕೆ ಜತೆಗೂಡಿ : ಕಾಂಗ್ರೆಸ್‌ ಕರೆ

ಜನಪ್ರತಿನಿಧಿ ವಾರ್ತೆ ( ನವ ದೆಹಲಿ) : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಮತ್ತೊಂದು ಸುತ್ತಿನ ಯಾತ್ರೆ ಆರಂಭಿಸಿದ್ದು, ಸಂಸದ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುವ ಯಾತ್ರೆಗೆ ʼಭಾರತ್‌ ಜೋಡೋ ನ್ಯಾಯ್‌ ಯಾತ್ರೆʼ ನಾಮಕರಣ ಮಾಡಿದೆ. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಒದಗಿಸಲು, ಅನ್ಯಾಯದ ವಿರುದ್ಧ ಧ್ವನಿ ಎತ್ತಲು, ಸದೃಢ ಭಾರತವನ್ನು ನಿರ್ಮಿಸಲು ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಜೊತೆಯಾಗಿ ಎಂದು ದೇಶದ ನಾಗರಿಕರಿಗೆ ಕರೆ ನೀಡಿದೆ.

14 ಜನವರಿಯಂದು ಮಣಿಪುರದಿಂದ ಆರಂಭವಾಗುವ ಭಾರತ್‌ ಜೋಡೋ ನ್ಯಾಯ್‌ ಯಾತ್ರೆ 66 ದಿನಗಳ ಕಾಲ ನಡೆಯಲಿಕ್ಕಿದ್ದು ಸುಮಾರು 6,713 ಕಿ.ಲೋ ಮೀಟರ್‌ನಷ್ಟು ದೂರ ಯಾತ್ರೆ ಸಾಗಿ ಮಾರ್ಚ್‌ 20 ರಂದು ಮುಂಬೈನಲ್ಲಿ ಕೊನೆಗೊಳ್ಳಲಿದೆ. 66 ದಿನಗಳು ನಡೆಯಲಿರುವ ಕಾಂಗ್ರೆಸ್‌ ಯಾತ್ರೆ 15 ರಾಜ್ಯಗಳ 110 ಜಿಲ್ಲೆಗಳನ್ನು ತಲುಪಲಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್‌ ಮಾಹಿತಿ ಹಂಚಿಕೊಂಡಿದೆ.

ಯಾತ್ರೆಯೂ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಅನ್ಯಾಯಗಳನ್ನು ಎತ್ತಿ ಹಿಡಿಯುತ್ತದೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ.

ಮಣಿಪುರ, ನಾಗಲ್ಯಾಂಡ್‌, ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ್‌, ಜಾರ್ಖಾಂಡ್‌, ಒಡಿಶಾ, ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ಗುಜರಾತ್‌ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಸಂಚರಿಸಲಿದೆ.

ಬಹಳ ವಿಶೇಷವಾಗಿ ಹಿಂದುತ್ವದ ಭದ್ರ ರಾಜ್ಯವೆಂದು ಇತ್ತೀಚೆಗಿನ ವರ್ಷಗಳಲ್ಲಿ ಹೇಳಿಸಿಕೊಳ್ಳುವ ಹಾಗೂ ಬಹು ನಿರೀಕ್ಷಿತ ಶ್ರೀರಾಮ ಮಂದಿರ ನಿರ್ಮಾಣಗೊಳ್ಳುತ್ತಿರುವ ಉತ್ತರ ಪ್ರದೇಶದಲ್ಲೇ ಹೆಚ್ಚು ಕಾಲ ಕಾಂಗ್ರೆಸ್‌ ಭಾರತ್‌ ಜೋಡೋ ನ್ಯಾಯ್‌ ಯಾತ್ರೆ ಕಳೆಯಲಿದೆ. ಉತ್ತರ ಪ್ರದೇಶದಲ್ಲಿ ಹನ್ನೊಂದು ದಿನಗಳ ಕಾಲ ಸುಮಾರು 1,074 ಕಿಲೋ ಮೀಟರ್‌ನಷ್ಟು ಯಾತ್ರೆ ಕ್ರಮಿಸಲಿದ್ದು, 20 ಜಿಲ್ಲೆಗಳನ್ನು ತಲುಪಿ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯಕ್ಕಾಗಿ ಧ್ವನಿ ಏರಿಸಲಿದೆ.

ಇನ್ನು, ಕಾಂಗ್ರೆಸ್‌ ಯಾತ್ರೆಯಲ್ಲಿ ಭಾಗವಹಿಸುವುದಕ್ಕೆ ಎಲ್ಲರಿಗೂ ಅವಕಾಶ ನೀಡಿದ್ದು, ಯಾತ್ರೆಯ ಮಾರ್ಗಕ್ಕೆ ನೀವು ಸಮೀಪದಲ್ಲೇ ಇದ್ದರೇ ನಮ್ಮೊಂದಿಗೆ ಹೆಜ್ಜೆ ಹಾಕಿ ಎಂದು ಕರೆ ನೀಡಿದೆ. ಭಾರತ್‌ ಜೋಡೋ ನ್ಯಾಯ್‌ ಯಾತ್ರೆಯ ʼಯೋಧʼನಾಗುವುದಕ್ಕೆ ಇಚ್ಛಿಸಿದ್ದಲ್ಲಿ bharatjodonyayyatra.com ಮೂಲಕ ನೊಂದಾಯಿಸಿಕೊಳ್ಳಬಹುದು ಅಥವಾ  9891802024 ನಂಬರ್‌ ಗೆ ಮಿಸ್ಡ್‌ ಕಾಲ್‌ ಕೊಡಬಹುದು ಎಂದೂ ಹೇಳಿದೆ.

ಯಾತ್ರೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ಕಾಂಗ್ರೆಸ್‌ ನ ಹಿರಿಯ ನಾಯಕರು ಹಾಗೂ ಪಕ್ಷದ ಎಲ್ಲಾ ರಾಜ್ಯ ಘಟಕದ ನಾಯಕರು ಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಮಾತ್ರವಲ್ಲದೇ, ಸಾಮಾಜಿಕ ಕಾರ್ಯಕರ್ತರು, ಆರ್ಟಿಸ್ಟ್‌, ಇಂಡಲೆಕ್ಚುವಲ್ಸ್‌ ಹಾಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯಕ್ಕಾಗಿ ಹೋರಾಡುವವರು ಪಾಲ್ಗೋಳ್ಳಲಿದ್ದಾರೆ ಎಂದು ಮಾಹಿತಿ ನೀಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!