Sunday, September 8, 2024

ಯಕ್ಷಕವಿ, ಉಪನ್ಯಾಸಕ ಶಿವಕುಮಾರ ಅಳಗೋಡು ಅವರಿಗೆ ಪಿ‌ಎಚ್ ಡಿ

ಕುಂದಾಪುರ: ಹವ್ಯಾಸಿ ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ, ಛಂದೋಬದ್ಧ ಯಕ್ಷಕವಿ, ಲೇಖಕರಾಗಿ ಗುರುತಿಸಿಕೊಂಡಿರುವ ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ಪದವಿ ವಿಭಾಗದ ಕನ್ನಡ ಉಪನ್ಯಾಸಕ ಶಿವಕುಮಾರ ಅಳಗೋಡು ಅವರು, ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಸಲ್ಲಿಸಿದ ‘ಯಕ್ಷಗಾನ ಪೂರ್ವರಂಗ ಅಧ್ಯಯನ’ ಸಂಶೋಧನ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಜ.10ರ ನುಡಿಹಬ್ಬದಂದು ಪಿ‌ಎಚ್.ಡಿ ಪದವಿ ನೀಡಿದೆ.

ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಅರುಣ್ ಕುಮಾರ್ ಎಸ್. ಆರ್. ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಮಂಡಿಸಿರುವ ಇವರು, ದ್ವಿತೀಯ ರ್‍ಯಾಂಕ್ ನೊಂದಿಗೆ ಮಂಗಳೂರು ವಿ.ವಿ ಯಿಂದ ಕನ್ನಡ ಎಂ.ಎ. ಪದವಿ ಪಡೆದಿದ್ದು, ಎನ್.ಇ.ಟಿ., ಕೆ.ಎಸ್.ಇಟಿ. ಪರೀಕ್ಷೆಗಳಲ್ಲೂ ಉತ್ತೀರ್ಣರಾಗಿದ್ದಾರೆ.

9 ವಿಭಿನ್ನ ಕೃತಿಗಳನ್ನು ಪ್ರಕಟಿಸಿರುವ ಇವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ನಿಟ್ಟೂರು ಸಮೀಪದ ಅಳಗೋಡು ಲಕ್ಷ್ಮಮ್ಮ, ತಿಮ್ಮಪ್ಪಯ್ಯನವರ ಮೊಮ್ಮಗ ಹಾಗೂ ಗೀತಾ, ಅನಂತಮೂರ್ತಿಯವರ ಪುತ್ರ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!