spot_img
Thursday, April 16, 2026
spot_img

ಕೋವಿಡ್‌ ಸೋಂಕಿನಿಂದ ಮೃತಪಟ್ಟರೆ ನಿರಾಕರಿಸದೆ ಅಂತ್ಯಕ್ರಿಯೆ ನಡೆಸಿ ಎಂದು ಸ್ಮಶಾನ, ಚಿತಾಗಾರಗಳಿಗೆ ಆರೋಗ್ಯ ಇಲಾಖೆ ಸುತ್ತೋಲೆ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) :  ಕೊವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆ ನಡೆಸುವ ಕುರಿತಾಗಿ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಜಿಲ್ಲೆಗಳಲ್ಲಿ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಲಾಗಿದೆ.

ಇದರಂತೆ ಸ್ಮಶಾನದ ಸಿಬ್ಬಂದಿ ಮೃತದೇಹದ ಅಂತ್ಯಕ್ರಿಯೆ ನಡೆಸಲು ನಿರಾಕರಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಂತ್ಯಕ್ರಿಯೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆಯಲ್ಲಿ ಮಾಹಿತಿ ನೀಡಿದೆ.

 ಇನ್ನು, ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಯಲ್ಲಿ ನಡೆಸಬೇಕು.

“ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ನಡೆಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ ಹಾಗೂ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಗಳಲ್ಲಿ ಅಂತ್ಯಕ್ರಿಯೆಗೆ ತರುವ ಮೃತದೇಹಗಳನ್ನು ಚಿತಾಗಾರ, ಸ್ಮಶಾನದ ಸಿಬ್ಬಂದಿ ನಿರಾಕರಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಎನ್‌-95 ಮಾಸ್ಕ್, ಗ್ಲೌವ್ಸ್‌ ಹಾಗೂ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸಿದ ನಂತರ ಅವುಗಳನ್ನು ಮಾರ್ಗಸೂಚಿಯಂತೆ ವಿಲೇವಾರಿ ಮಾಡಬೇಕು” ಎಂದು ಹೇಳಿದೆ.

ಈ ನಿಟ್ಟಿನಲ್ಲಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಡಳಿತಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!