spot_img
Thursday, April 16, 2026
spot_img

ಬೈಂದೂರಿನಲ್ಲಿ ಗಮಕ ಕಾರ್ಯಕ್ರಮ

ಬೈಂದೂರು: ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಲಾವಣ್ಯ (ರಿ) ಬೈಂದೂರು ಹಾಗೂ ಸುರಭಿ (ರಿ) ಬೈಂದೂರು ಸಂಸ್ಥೆಗಳೊಂದಿಗೆ ಜಂಟಿಯಾಗಿ ಆಯೋಜಿಸಿದ ಕರ್ಣಾಟಕ ಸಂಭ್ರಮ ೫೦ ’ಸಾಂಸ್ಕೃತಿಕ ಸೌರಭ ೨೦೨೩-೨೪’ ಕಾರ್ಯಕ್ರಮದ ಅಂಗವಾಗಿ ಇತ್ತಿಚೆಗೆ ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಮೊಗೇರಿ ಗೋಪಾಲಕೃಷ್ಣ ಅಡಿಗ ವೇದಿಕೆಯಲ್ಲಿ ಕೋಟ ಸುಜಯೀಂದ್ರ ಹಂದೆ ಮತ್ತು ಬಳಗದವರಿಂದ ಗಮಕ ವಾಚನ ಕಾರ್ಯಕ್ರಮ ನೆರವೇರಿತು.

ಅನುಭಾವಿ ಸಂತ ಕವಿ ಕನಕದಾಸರ ನಳ ಚರಿತ್ರೆಯ ಕಾರ್ಕೋಟಕ ದಂಶನ ಭಾಗದ ಕಥಾವಸ್ತುವನ್ನು ಆಯ್ದುಕೊಂಡಿದ್ದು, ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ಕನ್ನಡ ಉಪನನ್ಯಾಸಕ ಸುಜಯೀಂದ್ರ ಹಂದೆ ಎಚ್ ಗಮಕ ವಾಚನ ಮಾಡಿ, ಉಡುಪಿ ಎಂ. ಜಿ. ಎಂ. ಕಾಲೇಜಿನ ಕನ್ನಡ ಉಪನ್ಯಾಸಕ ಕೋಟ ರಾಘವೇಂದ್ರ ತುಂಗ ವ್ಯಾಖ್ಯಾನ ನಡೆಸಿಕೊಟ್ಟರು.

ಬೈಂದೂರು ವಿಧಾನ ಸಭಾ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಪ್ರಾಂಶುಪಾಲ ಮಂಜುನಾಥ ಪಿ. ನಾಯ್ಕ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಉಪ ಪ್ರಾಂಶುಪಾಲ ಪದ್ಮನಾಭ ಪಿ, ಲಾವಣ್ಯ ಅಧ್ಯಕ್ಷ ನರಸಿಂಹ ಬಿ. ನಾಯಕ್, ಸುರಭಿ ಅಧ್ಯಕ್ಷ ನಾಗರಾಜ ಪಿ. ಉಪಸ್ಥಿತರಿದ್ದರು. ಸುರಭಿಯ ಸುಧಾಕರ ಪಿ. ವಂದಿಸಿದರು. ಗಣಪತಿ ಹೋಬಳಿದಾರ್ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!