spot_img
Wednesday, January 22, 2025
spot_img

ರಾಮ ಮಂದಿರ ಲೋಕಾರ್ಪಣೆ : ಇಂದಿನಿಂದ 11 ದಿನಗಳ ಕಾಲ ಪ್ರಧಾನಿ ಮೋದಿ ವಿಶೇಷ ಅನುಷ್ಠಾನ !

ಜನಪ್ರತಿನಿಧಿ ವಾರ್ತೆ ( ನವ ದೆಹಲಿ) : ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಲೋಕಾರ್ಪಣೆ ಸಮಾರಂಭದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಇಂದು(ಶುಕ್ರವಾರ) ಆಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಇಂದಿನಿಂದ 11 ದಿನಗಳ ಕಾಲ ‘ಅನುಷ್ಠಾನ’ (ವಿಶೇಷ ಆಚರಣೆ) ಆಚರಣೆ  ಪ್ರಾರಂಭಿಸುವುದಾಗಿ ಅವರು ಹೇಳಿದ್ದಾರೆ.

ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ಆಡಿಯೊ ಸಂದೇಶದಲ್ಲಿ, ಪ್ರಧಾನಿ ಮೋದಿ ಅವರು “ಐತಿಹಾಸಿಕ” ಮತ್ತು “ಶುಭಕರ” ಸಂದರ್ಭದಲ್ಲಿ ಸಾಕ್ಷಿಯಾಗಲು ನಾನು ಅದೃಷ್ಟಶಾಲಿ ಎಂದು ಅವರು ತಮ್ಮ ಸಂತೋಷವನ್ನು ಹೇಳಿಕೊಂಡಿದ್ದಾರೆ.

ರಾಮಮಂದಿರದದಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆಗೆ ಇನ್ನು ಕೇವಲ 11 ದಿನಗಳು ಬಾಕಿ ಉಳಿದಿದ್ದು, ಮಹಾಮಸ್ತಕಾಭಿಷೇಕದ ವೇಳೆ ಭಾರತದ ಜನತೆಯನ್ನು ಪ್ರತಿನಿಧಿಸಲು ದೇವರು ನನಗೆ ಅವಕಾಶ ಮಾಡಿಕೊಟ್ಟಿದ್ದಾನೆ. ಇದನ್ನು ಗಮನದಲ್ಲಿಟ್ಟುಕೊಂಡು ಇಂದಿನಿಂದ 11 ದಿನಗಳ ಕಾಲ ವಿಶೇಷ ಅನುಷ್ಠಾನ ಆಚರಣೆಯನ್ನು ಆರಂಭಿಸುತ್ತಿದ್ದೇನೆ ಎಂದಿದ್ದಾರೆ.

“ನಾನು ಭಾವುಕನಾಗಿದ್ದೇನೆ. ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ನಾನು ಇಂತಹದೊಂದು ಕ್ಷಣವನ್ನು ಎದುರುಗಾಣುತ್ತಿದ್ದಾನೆ ಈ ಕ್ಷಣವನ್ನು ಆನಂದಿಸುವುದಕ್ಕೆ ಕಾಯುತ್ತಿದ್ದೇನೆ” ಎಂದು ಅವರು ಹೇಳಿದರು.

“ಜೀವನದ ಕೆಲವು ಕ್ಷಣಗಳು ದೈವಿಕ ಆಶೀರ್ವಾದದಿಂದ ಮಾತ್ರ ವಾಸ್ತವಕ್ಕೆ ತಿರುಗುತ್ತವೆ. ಇದು ಇಂದು ನಮಗೆಲ್ಲರಿಗೂ ಮತ್ತು ಪ್ರಪಂಚದಾದ್ಯಂತ ಹರಡಿರುವ ರಾಮನ ಭಕ್ತರಿಗೂ ಅಂತಹ ಪವಿತ್ರ ಸಂದರ್ಭವಾಗಿದೆ. ಎಲ್ಲೆಡೆ ಭಗವಾನ್ ರಾಮನ ಭಕ್ತಿಯ ಅದ್ಭುತ ಶಕ್ತಿ ಇದೆ.” ಎಂದು ಪ್ರಧಾನಿ ಮೋದಿ ಸೇರಿಸಿದರು.

ಇನ್ನು, ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ಸಂಬಂಧಿಸಿದ ಧರ್ಮಗ್ರಂಥಗಳಲ್ಲಿ ವಿವರಿಸಿರುವ ಕಠಿಣ ಮಾರ್ಗಸೂಚಿಗಳನ್ನು ಪ್ರಧಾನಿ ಅನುಸರಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ.

ಸಮಾರಂಭಕ್ಕೆ ದೇಶಾದ್ಯಂತ ಸಾವಿರಾರು ಮಂದಿಯನ್ನು ಆಹ್ವಾನಿಸಲಾಗಿದೆ ಮತ್ತು ಆಹ್ವಾನಿತರಲ್ಲಿ ರಾಮಮಂದಿರವನ್ನು ನಿರ್ಮಿಸಿದ ಕಾರ್ಮಿಕರ ಕುಟುಂಬಗಳೂ ಸೇರಿದ್ದಾರೆ.

ಬಾಲಿವುಡ್ ಸೆಲೆಬ್ರಿಟಿಗಳು, ಕ್ರಿಕೆಟಿಗರು, ಕೈಗಾರಿಕೋದ್ಯಮಿಗಳು ಸೇರಿದಂತೆ 7,000 ಕ್ಕೂ ಹೆಚ್ಚು ಜನರು ದೇವಸ್ಥಾನ ಟ್ರಸ್ಟ್, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಆಹ್ವಾನಿತರ ಪಟ್ಟಿಯಲ್ಲಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!