spot_img
Thursday, April 16, 2026
spot_img

‘ಒಂದು ದೇಶ, ಒಂದು ಚುನಾವಣೆ’ ಪರಿಕಲ್ಪನೆಯು ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿದೆ : ಕೋವಿಂದ್‌ ನೇತೃತ್ವದ ಸಮಿತಿಗೆ ದೀದಿ ಪತ್ರ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : “ಸದ್ಯ ಭಾರತದಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ವಿಭಿನ್ನ ಚುನಾವಣಾ ವೇಳಾ ಪಟ್ಟಿಗಳಿವೆ. ರಾಜಕೀಯ ಬೆಳವಣಿಗೆಗಳ ಕಾರಣದಿಂದ ‘ಒಂದು ದೇಶ, ಒಂದು ಚುನಾವಣೆ’ಯ ಸಾಧಕ-ಬಾಧಕಗಳ ಕುರಿತು ಸಭೆ ನಡೆಸಿರುವ ಕೋವಿಂದ್‌ ನೇತೃತ್ವದ ಸಮಿತಿಯು ಅಭಿಪ್ರಾಯ ಕೋರಿ ಪಕ್ಷಗಳಿಗೆ ಪತ್ರ ಬರೆದಿರುವುದಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ  ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಪ್ರತಿಕ್ರಯಿಸಿದ್ದಾರೆ.

”ಸಾರ್ವತ್ರಿಕ ಚುನಾವಣೆ ಹಾಗೂ ರಾಜ್ಯ ವಿಧಾನಸಭೆಗಳ ಚುನಾವಣೆಯನ್ನು ಏಕಕಾಲಕ್ಕೆ ನಡೆಸುವ ‘ಒಂದು ದೇಶ, ಒಂದು ಚುನಾವಣೆ’ ಪರಿಕಲ್ಪನೆಯು ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿದೆ. ಇದು ರಾಷ್ಟ್ರೀಯ ಹಿತಾಸಕ್ತಿ ನೆಪದಲ್ಲಿ ನಿರಂಕುಶ ಧೋರಣೆ ಹೇರುವ ಪ್ರಯತ್ನವಾಗಿದೆ. ಹಾಗಾಗಿ, ನಾನು ಈ ಪರಿಕಲ್ಪನೆಯನ್ನು ವಿರೋಧಿಸುತ್ತೇನೆ” ಎಂದು ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಬರೆದ ಪತ್ರದಲ್ಲಿ  ‘ದೀದಿ’ ವಿವರಿಸಿದ್ದಾರೆ.

ಇನ್ನು, ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಕಾರ‍್ಯದರ್ಶಿ ಡಾ. ನಿತಿನ್‌ ಚಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ ಮಮತಾ, ”ಒಂದು ದೇಶ, ಒಂದು ಚುನಾವಣೆ ಕಲ್ಪನೆಯು ಒಕ್ಕೂಟ ವ್ಯವಸ್ಥೆಯ ವಿರುದ್ಧವಾಗಿದೆ. ವಿಧಾನಸಭೆ ಚುನಾವಣೆಗಳಿಗೂ ಹಾಗೂ ಲೋಕಸಭೆ ಚುನಾವಣೆಗೂ ಸಮಯದ ಅಂತರವಿರುವ ಸಂದರ್ಭದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವುದು ಸರಿಯಲ್ಲ. ಸದ್ಯಕ್ಕೆ ಚುನಾವಣೆಯನ್ನು ನಿರೀಕ್ಷಿಸದ ರಾಜ್ಯಗಳ ಮೇಲೆ ರಾಜಕೀಯ ಹಿತಾಸಕ್ತಿಗಾಗಿ ಚುನಾವಣೆಗೆ ಹೋಗುವಂತೆ ಒತ್ತಡ ಹೇರುವುದು ಸರಿಯಲ್ಲ,” ಎಂಬ ಅಂಶಗಳನ್ನು ಪತ್ರದಲ್ಲಿ ಮಮತಾ ಪ್ರಸ್ತಾಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!