Sunday, September 8, 2024

ಬೈಂದೂರು: ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

ಬೈಂದೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬೈಂದೂರು ತಾಲೂಕು, ಜ್ಞಾನವಿಕಾಸ ಕಾರ್ಯಕ್ರಮದ ಅಂಗವಾಗಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಬೈಂದೂರು ತಾಲೂಕಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಉಡುಪಿ ಜಿಲ್ಲೆಯ ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇ ಗೌಡರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪತ್ರಿಕಾ & ಮಾಧ್ಯಮ ವೃತ್ತಿ ನಿರತರಾದ ಶಯದೇವಿಸುತೆ ಮರವಂತೆ (ಜ್ಯೋತಿಜೀವನ್‌ಸ್ವರೂಪ್)ರವರು ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುಮನ ರಾಮದಾಸ್‌ರವರು ಭಾಗವಹಿಸಿ ಮೊಬೈಲ್ ಬಳಕೆಯಿಂದಾಗುವ ಸಾಧಕ-ಬಾಧಕಗಳ ಕುರಿತು ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಗಳಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬೈಂದೂರು ತಾಲೂಕು ಯೋಜನಾಧಿಕಾರಿ ಕೆ. ವಿನಾಯಕ ಪೈ, ಬೈಂದೂರು ತಾಲೂಕಿನ ಮಹಿಳಾ ಪೊಲೀಸ್ ಹೆಡ್ ಕಾನ್ಸ್ಟೇಬಲ್ ನಾಗಶ್ರೀ, ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಇದರ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ತಾಲೂಕಿನ ಕೇಂದ್ರ ಸಮಿತಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ರಘುರಾಮ್ ಕೆ. ಪೂಜಾರಿ, ಬೈಂದೂರು ತಾಲೂಕಿನ ಕೇಂದ್ರ ಸಮಿತಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾದ ವಾಸು ಮೇಸ್ತ, ಶಿರೂರು ಕಾಲೇಜಿನ ಪ್ರಾಂಶುಪಾಲರಾದ ಸುಜಾತ, ಜ್ಞಾನವಿಕಾಸ ಮೇಲ್ವಿಚಾರಕಿ ರೇವತಿ ಶಿರೂರು, ಬೈಂದೂರು ಶ್ರೀ ಸೀತಾರಾಮಚಂದ್ರ ದೇವಸ್ಥಾನ ಹಾಗೂ ರಾಮಕ್ಷತ್ರಿಯ ಸಮಾಜದ ಅಧ್ಯಕ್ಷ ರಾಮಕೃಷ್ಣ ಸಿ., ಕುಂದಾಪುರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನುರಾಧ ಹಾದಿಮನಿ ಮತ್ತು, ಬೈಂದೂರು ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿ ಎನ್. ಭಾರತಿ ಮೊದಲಾದವರು ಉಪಸ್ಥಿತರಿದ್ದರು.

ಬೈಂದೂರು ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ, ಮೇಲ್ವಿಚಾರಕರ ಹಾಗೂ ಸಂಯೋಜಕಿಯರ ನೇತೃತ್ವದಲ್ಲಿ ನಡೆದ ಈ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಪುಷ್ಪಗುಚ್ಛ ಸ್ಪರ್ಧೆ, ಸ್ವ-ಉದ್ಯೋಗ ಮಳಿಗೆಗಳು, ನಡೆದಂತಹ ವಿವಿಧ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಗಳು ಈ ಮಹಿಳಾ ಕಾರ್ಯಕ್ರಮದ ಬಹು ಮುಖ್ಯ ವೈಶಿಷ್ಟ್ಯತೆಗಳಾಗಿದ್ದವು.

ಗೋಳಿಹೊಳೆ ವಲಯದ ಮೇಲ್ವಿಚಾರಕಿ ಸಂಗೀತಾ ಕಾರ್ಯಕ್ರಮ ನಿರೂಪಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸುರೇಖಾ ಸ್ವಾಗತಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!