Sunday, September 8, 2024

ಯುವ ನಿಧಿ : ಭತ್ಯೆಯ ಜೊತೆಗೆ ಉದ್ಯೋಗ ಲಭಿಸಲು ಬೇಕಾದಂತಹ ಕೌಶಲ್ಯ ವೃದ್ಧಿಸಿಕೊಳ್ಳಲು ತರಬೇತಿ : ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಶಿವಮೊಗ್ಗ) :  ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, 1.18 ಕೋಟಿ ಮಹಿಳಾ ಯಜಮಾನಿಗೆ ತಿಂಗಳಿಗೆ ರೂ.2,000 ನೀಡುತ್ತಿರುವುದು ಸತ್ಯವಲ್ಲವೇ? ಇದುವರೆಗೆ ಯಾವುದೇ ಜಾತಿ, ಧರ್ಮ, ಭಾಷೆಯ ಬೇಧವಿಲ್ಲದೇ ಮಹಿಳೆಯರು ಶಕ್ತಿ ಯೋಜನೆಯಡಿ 130 ಕೋಟಿ ಉಚಿತ ಟಿಕೇಟ್ ಪಡೆದು ಪ್ರಯಾಣಿಸಿರುವುದು ಸುಳ್ಳಾಗಲು ಸಾಧ್ಯವೇ? 200 ಯೂನಿಟ್ ವರೆಗೆ ಉಚಿತ ವಿದ್ಯುತ್ 1.51 ಕೋಟಿ ಜನರಿಗೆ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ  170 ರೂ. ಫಲಾನುಭವಿಗಳಿಗೆ ತಲುಪುತ್ತಿದೆ. ಈ ಎಲ್ಲ ಸತ್ಯಗಳನ್ನು ಯಾರು ಬೇಕಾದರೂ ಪರಿಶೀಲನೆ ನಡೆಸಲಿ ಎಂದು ಅವರು ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ ಮಾಸಿಕ 4 ರಿಂದ 5 ಸಾವಿರ ರೂ.ಗಳು ಸೇರುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿದ ರೂ.ಗಳು ಸೇರುತ್ತದೆ. ಇದು  ಬಡಜನರಿಗೆ ಸೌಲಭ್ಯ ನೀಡುತ್ತದೆ. ಬೆಲೆಯೇರಿಕೆ, ನಿರುದ್ಯೋಗ ಹೆಚ್ಚಾಗಿದ್ದು, ಬಡವರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಈ ಯೋಜನೆಗಳು ಹೆಚ್ಚಿಸುತ್ತವೆ ಎಂದಿದ್ದಾರೆ.

ಇಂದು ನಮ್ಮ ಸರ್ಕಾರದ ಐದನೇ ಗ್ಯಾರಂಟಿಯಾದ ಯುವನಿಧಿಯನ್ನು ಜಾರಿಗೊಳಿಸಲಾಗುತ್ತಿದೆ. ಪದವಿ ಪಡೆದ ನಿರುದ್ಯೋಗಿಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆಯನ್ನು 2 ವರ್ಷಗಳ ಕಾಲ ನೀಡುವ ಯೋಜನೆಯಾಗಿದೆ. ಈ ಅವಧಿಯಲ್ಲಿ ಭತ್ಯೆಯ ಜೊತೆಗೆ ಉದ್ಯೋಗ ಲಭಿಸಲು ಬೇಕಾದಂತಹ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ಕೌಶಲ್ಯ ತರಬೇತಿಯನ್ನು ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಎರಡು ವರ್ಷದೊಳಗೆ ಸರ್ಕಾರಿ, ಖಾಸಗಿ ಅಥವಾ ಸ್ವಯಂ ಉದ್ಯೋಗ ದೊರೆತಲ್ಲಿ ಯುವನಿಧಿ ಭತ್ಯೆಯನ್ನು ನೀಡಲಾಗುವುದಿಲ್ಲ. ಕೈಗಾರಿಕೆಗಳಲ್ಲಿ ಬೇಡಿಕೆಯಿರುವ ಕೌಶಲ್ಯದ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿಯ ಅವಧಿಯನ್ನು ಸಂಬಂಧಪಟ್ಟ ಇಲಾಖೆ ನಿರ್ಧರಿಸಲಿದೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!