spot_img
Thursday, April 16, 2026
spot_img

ಅರವಿಂದ್ ಕೇಜ್ರಿವಾಲ್ ಗೆ ನಾಲ್ಕನೇ ಬಾರಿ ಸಮನ್ಸ್‌ ಜಾರಿ ಮಾಡಿದ ಇಡಿ !

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಸದ್ಯ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನಾಲ್ಕನೇ ಬಾರಿ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.
  
ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರಿಗೆ ಜನವರಿ 18 ರಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

55 ವರ್ಷದ ಕೇಜ್ರಿವಾಲ್ ಅವರು ಜನವರಿ 3 ರಂದು ಇಡಿ ಮುಂದೆ ಮೂರನೇ ಬಾರಿ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು. 

ಈ ಹಿಂದೆ 2023 ರ ನವೆಂಬರ್ 2 ರಂದು ಮತ್ತು ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿಗೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ವಿಚಾರಣೆಗೆ ಗೈರು ಆಗಿದ್ದ ಕೇಜ್ರಿವಾಲ್ ಅವರು ತಮಗೆ ನೀಡಿರುವ ನೋಟಿಸ್ ಕಾನೂನು ಬಾಹಿರ ಎಂದು ಲಿಖಿತ ಉತ್ತರ ಕಳುಹಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!