spot_img
Thursday, April 16, 2026
spot_img

ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ವಿಧಿವಶ !

ಜನಪ್ರತಿನಿಧಿ ವಾರ್ತೆ ( ದೆಹಲಿ) : ಪ್ರಸಿದ್ಧ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ಇಂದು(ಶನಿವಾರ) ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ  92 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಪುಣೆಯಲ್ಲಿರುವ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕಿರಾನಾ ಘರಾನಾವನ್ನು ಪ್ರತಿನಿಧಿಸಿದ ಅತ್ರೆ ಅವರು ಭಾರತ ಸರ್ಕಾರದಿಂದ ಕೊಡಮಾಡುವ ನಾಗರಿಕ ಶ್ರೇಷ್ಠ ಮೂರೂ ಪದ್ಮ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ನಿದ್ರಿಸುವಾಗಲೇ  ಹೃದಯಾಘಾತವಾಗಿದೆ ಎಂದು ಮಾಹಿತಿ ಇದೆ. ಅವರನ್ನು ನಗರದ ಕೊತ್ರುಡ್ ಪ್ರದೇಶದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಬೆಳಿಗ್ಗೆ 5.30 ಕ್ಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ಅವರು, 1932ರ ಸೆಪ್ಟೆಂಬರ್ 13ರಂದು ಜನಿಸಿದರು. ಕಾನೂನು ಪದವೀಧರರಾಗಿದ್ದ ಅತ್ರೆ ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು. ಬಹುಮುಖಿ ವ್ಯಕ್ತಿತ್ವದ ಅತ್ರೆ ಶಾಸ್ತ್ರೀಯ ಗಾಯಕಿ ಮಾತ್ರವಲ್ಲದೇ, ಶಿಕ್ಷಣತಜ್ಞೆಯಾಗಿ, ಸಂಶೋಧಕಿಯಾಗಿ, ಲೇಖಕಿಯಾಗಿ ಗುರುತಿಸಿಕೊಂಡಿದ್ದರು. 1990ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಹಾಗೂ 2022ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಭಾರತ ಸರ್ಕಾರ ಅವರನ್ನು ಗೌರವಿಸಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!